ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆ ಬಗ್ಗೆ ಸೋಮವಾರ ಸದನದಲ್ಲಿ ಗೃಹ ಸಚಿವರಿಂದ ಉತ್ತರ: ದಿನೇಶ್ ಗುಂಡೂರಾವ್

dinesh gundurao
15/08/2025

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಸ್ ಐಟಿ ಪಾರದರ್ಶಕವಾಗಿ ಯಾರ ಒತ್ತಡಕ್ಕೂ ಮಣಿಯದೇ ಕಾರ್ಯನಿರ್ವಹಿಸುತ್ತಿದೆ, ಈ ತನಿಖೆಯ ಬಗ್ಗೆ ಸೋಮವಾರ ಗೃಹ ಸಚಿವರು ಸದನದಲ್ಲಿ ಉತ್ತರ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.

ಸದನದಲ್ಲಿ ತನಿಖೆ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಬಹುದು. ಇದರಲ್ಲಿ ಮುಚ್ಚಿ ಹಾಕುವಂತಹದ್ದು ಏನೂ ಇಲ್ಲ, ದರ್ಶನ್, ಪ್ರಜ್ವಲ್ ಪ್ರಕರಣಗಳೇ ಇರಲಿ ನಿಜಾಂಶ ಹೊರಬರಬೇಕು. ತಪ್ಪಾಗಿದ್ದರೆ ಶಿಕ್ಷೆಯಾಗಬೇಕು, ಅಮಾಯಕರಿಗೆ ತೊಂದರೆಯಾಗಬಾರದು. ಆಪಾದನೆಗೆ ತಕ್ಕದಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಯಾರ್ಯಾರೋ ನೀಡುವ ಹೇಳಿಕೆಗಳಿಗೆಲ್ಲ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ, ನಿಜಾಂಶ ಏನಿದೆ, ಸಾಕ್ಷಿ ಏನಿದೆ ಅದರ ಪ್ರಕಾರ ಸರ್ಕಾರ ಹಾಗೂ ಪೊಲೀಸ್ ಇಲಾಖೆ ನಡೆದುಕೊಳ್ಳುತ್ತದೆ ಎಂದರು. ಇದೇ ವೇಳೆ ಎಸ್ ಐಟಿ ತನಿಖೆ ಎಲ್ಲಿಯವರೆಗೆ ನಡೆಯಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಎಸ್ ಐಟಿ ನಿರ್ಧಾರ ಮಾಡಲಿದೆ. ಕಾಡು ಪ್ರದೇಶಗಳಲ್ಲಿ ಮಳೆಯ ನಡುವೆ ಅಗೆಯುವುದು ಸುಲಭದ ಕೆಲಸವಲ್ಲ, ಪೊಲೀಸರು ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದಾರೆ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version