ಧರ್ಮಸ್ಥಳ ಪ್ರಕರಣ: ಜನಾರ್ದನ ರೆಡ್ಡಿ ಹೇಳಿಕೆಗೆ ಸಸಿಕಾಂತ್ ಸೆಂಥಿಲ್ ತಿರುಗೇಟು

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ, ಇದರ ರೂವಾರಿ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಂತ ಹೇಳಿಕೆ ನೀಡಿದ್ದ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯೆ ನೀಡಿದ್ದಾರೆ.
ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ ಎಂದು ಸಸಿಕಾಂತ್ ಸೆಂಥಿಲ್ ಹೇಳಿದ್ದು, ನಾನು ಯಾವುದೇ ರಾಜ್ಯಸರ್ಕಾರಕ್ಕೆ ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರಲ್ಲದೇ, ಜನಾರ್ದನ ರೆಡ್ಡಿ ಕಟ್ಟು ಕತೆಗಳನ್ನು ಹೇಳುತ್ತಿದ್ದಾರೆ ಎಂದು ಅವರು ತಿರುಗೇಟು ನೀಡಿದ್ದಾರೆ.
ಈ ಆರೋಪ ಕೇಳಿ ನಗು ಬರುತ್ತಿದೆ. ನನಗೆ ಇದರ ಹಿಂದೆ ಏನಿದೆ ಎಂಬುದು ಗೊತ್ತಿಲ್ಲ. ನಾನು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿ 6 ವರ್ಷ ಆಗಿದೆ. ಈಗ ನಾನು ಬೇರೆ ಪಕ್ಷದಲ್ಲಿ ಇದ್ದೇನೆ. ನಾನು ಬಳ್ಳಾರಿಯಲ್ಲಿ ಕರ್ತವ್ಯದಲ್ಲಿ ಇದ್ದಾಗ ಅವರ (ಜನಾರ್ದನ ರೆಡ್ಡಿ) ಬಂಧನ ಆಗಿತ್ತು. ನಾನು ಅವಾಗ ಮಾತ್ರ ರೆಡ್ಡಿಯವರನ್ನು ನೋಡಿದ್ದು ಎಂದು ಸೆಂಥಿಲ್ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD