ಧರ್ಮಸ್ಥಳ  ಪ್ರಕರಣ: ಬೆಳ್ತಂಗಡಿಯಿಂದಲೇ ಕಾರ್ಯನಿರ್ವಹಿಸಲಿದೆ ಎಸ್ ಐಟಿ

dharmasthala
25/07/2025

ಬೆಳ್ತಂಗಡಿ:  ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿರುವ ಅಪರಾಧ ಕೃತ್ಯಗಳಿಗೆ ಸಂಬಂದಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದ್ದು, ಇದೀಗ ತನಿಖಾ ತಂಡ ಕಾರ್ಯಾಚರಣೆ ಆರಂಭ ನಡೆಸಲು ಸಕಲ ಸಿದ್ಧತೆ ನಡೆಸಿದೆ. ಇದೇ ಸಂದರ್ಭದಲ್ಲಿ  ಎಸ್ ಐಟಿ  ಬೆಳ್ತಂಗಡಿಯಿಂದಲೇ ಕಾರ್ಯಾಚರಣೆ ನಡೆಸಲಿದೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪವೇ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ವಸತಿ ಗೃಹವನ್ನೇ ಎಸ್ ಐಟಿ ತನಿಖಾ ಕೇಂದ್ರವನ್ನಾಗಿ ಮಾಡಲಿದೆ. ಜು.25ರಂದು ಬೆಳ್ತಂಗಡಿಯಲ್ಲೇ ಎಸ್ ಐಟಿ ಕಚೇರಿ ಆರಂಭಗೊಳ್ಳಲಿದೆ ಎನ್ನಲಾಗಿದೆ.

ಪೊಲೀಸ್ ವಸತಿ ಗೃಹಗಳ ಉದ್ಘಾಟನೆ ಇನ್ನೂ ಆಗಿಲ್ಲ. ಸದ್ಯ ಎಸ್ ಐಟಿ ಕಾರ್ಯನಿರ್ವಹಿಸಲು ಸಾಧ್ಯವಿರುವಷ್ಟು ಸ್ಥಳಾವಕಾಶಗಳಿವೆ. ಪೊಲೀಸ್ ಠಾಣೆಯ ಆವರಣದಲ್ಲಿ ಈ ಕಟ್ಟಡ ಇರುವುದರಿಂದ ಎಸ್ ಐಟಿ ತನಿಖೆಗೆ ಇದು ಸೂಕ್ತ ಎಂಬ ಕಾರಣಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಮೊದಲಿಗೆ ಮಂಗಳೂರಿನಿಂದ ಎಸ್ ಐಟಿ ತಂಡ ಕಾರ್ಯನಿರ್ವಹಿಸಲಿದೆ ಎನ್ನಲಾಗಿತ್ತು. ಆದರೆ ಇದೀಗ ಬೆಳ್ತಂಗಡಿಯನ್ನೇ ಕೇಂದ್ರ ಸ್ಥಾನವನ್ನಾಗಿಸಿ ಎಸ್ ಐಟಿ ತನಿಖೆ ನಡೆಸಲು ಮಹತ್ವದ ತೀರ್ಮಾನ ಕೈಗೊಂಡಿದೆ. ಇದು ಈ ಪ್ರಕರಣದ ತನಿಖೆಗೆ ಹೆಚ್ಚು ಸೂಕ್ತವಾದ ನಿರ್ಧಾರವೇ ಆಗಿದೆ ಎನ್ನುವ ಅಭಿಪ್ರಾಯಗಳು ಕೂಡ ಕೇಳಿ ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version