ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಎಸ್ ಐಟಿ ತನಿಖೆ ಬಗ್ಗೆ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ದಾವಣಗೆರೆ: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾಗಿರುವ ನೂರಾರು ಅಸಹಜ ಸಾವು ಪ್ರಕರಣ ಎಸ್ ಐಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ದಾವಣಗೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಜನರ ಅಪೇಕ್ಷೆಯಂತೆ ಎಸ್ ಐಟಿ ತನಿಖೆಗೆ ಆದೇಶ ನೀಡಿದೆ. ಶನಿವಾರದಿಂದ ತನಿಖೆ ಆರಂಭಗೊಂಡಿದೆ ಎಂದು ತಿಳಿಸಿದರು.
ಇನ್ನೂ ತನಿಖೆಯ ವರದಿ ಬರುವವರೆಗೆ ನಾವು ಏನೂ ಮಾಹಿತಿಯನ್ನು ನೀಡುವಂತಿಲ್ಲ ಎಂದು ತನಿಖೆ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ಅವರು ನಿರಾಕರಿಸಿದರು.
ಧರ್ಮಸ್ಥಳದಲ್ಲಿ ನೂರಾರು ಜನರ ಅಸಹಜ ಸಾವಿನ ಸಂಬಂಧ ಅನಾಮಿಕ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ತನ್ನನ್ನು ಬೆದರಿಸಿ, ಹಲವಾರು ಮೃತದೇಹಗಳನ್ನು ಹೂತು ಹಾಕಿಸಲಾಗಿದೆ. ಅದರಲ್ಲಿ ಅತ್ಯಾಚಾರಕ್ಕೊಳಗಾದ ಹೆಣ್ಣುಮಕ್ಕಳ ಮೃತದೇಹಗಳು ಕೂಡ ಇದ್ದವು ಎನ್ನುವ ಅಂಶಗಳು ಉಲ್ಲೇಖಿಸಲಾಗಿತ್ತು. ಇದೀಗ ಶನಿವಾರದಿಂದ ಎಸ್ ಐಟಿ ತನಿಖೆ ಆರಂಭಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD