ಧಾರವಾಡ ಗ್ರಾಮ ಪಂಚಾಯತಿಯಲ್ಲಿ ಹಲವು ಹುದ್ದೆಗಳ ಭರ್ತಿ - Mahanayaka

ಧಾರವಾಡ ಗ್ರಾಮ ಪಂಚಾಯತಿಯಲ್ಲಿ ಹಲವು ಹುದ್ದೆಗಳ ಭರ್ತಿ

grama panchayat
08/11/2024

Dharwad Gram Panchayat Jobs — ಧಾರವಾಡ ಜಿಲ್ಲಾ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿರಬೇಕಾದ ಅರ್ಹತೆಗಳೇನು? ಎಷ್ಟು ಹುದ್ದೆಗಳು ಖಾಲಿ ಇವೆ? ಆಯ್ಕೆಯಾದವರಿಗೆ ಸಿಗುವ ಗೌರವ ಧನ ಎಷ್ಟು? ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ.

ಧಾರವಾಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಯ ಒಟ್ಟು 32 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳ ಖಾಲಿ ಇವೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :

ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ಸರ್ಟಿಫಿಕೇಶನ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಮುಗಿಸಿದವರಿಗೆ ಇದರಲ್ಲಿ ಆದ್ಯತೆ ನೀಡಲಾಗುವುದು.
ವಯೋಮಿತಿ ಅರ್ಹತೆ ನೋಡುವುದಾದರೆ ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಹಾಗೂ ಗರಿಷ್ಟ 35 ವರ್ಷದ ಒಳಗಿರಬೇಕು. ಮೀಸಲಾತಿ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಗುವ ವೇತನ — ಮಾಸಿಕ 16,382ರೂ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಧಾರವಾಡ ಜಿಲ್ಲಾ ಪಂಚಾಯಿತಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಸಿಗುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಸರಿಯಾದ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 4 ಡಿಸೆಂಬರ್ 2024

ಅರ್ಜಿ ನಮೂನೆಯ ಲಿಂಕ್: https://zpdharwad.karnataka.gov.in/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ