ಮನೆ ಮೇಲೆ ರಾಷ್ಟ್ರಧ್ವಜ ಕಟ್ಟುತ್ತಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಬೆಂಗಳೂರು: ಮನೆಯ ಮೇಲೆ ರಾಷ್ಟ್ರ ಧ್ವಜ ಕಟ್ಟಲು ಯತ್ನಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನಲ್ಲಿ ನಡೆದಿದೆ.
ವಿಶುಕುಮಾರ್(33) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಧ್ವಜ ಕಟ್ಟುತ್ತಿದ್ದ ವೇಳೆ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ವಿಶುಕುಮಾರ್ ನಿನ್ನೆ ಮಧ್ಯಾಹ್ನದ ವೇಳೆ ಧ್ವಜಕಟ್ಟಲು ಟೆರಸ್ ಮೇಲೆ ಹತ್ತಿದ್ದರು. ಅಲ್ಲಿಂದ ಆಯ ತಪ್ಪಿ ಅವರು 30 ಅಡಿ ಆಳಕ್ಕೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಹೆಣ್ಣೂರು ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka