ಡಿ.ಕೆ.ಶಿವಕುಮಾರ್ ಗೆ ಸಂಕಷ್ಟ: ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

d k shivakumar
19/10/2023

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ  ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆ ರದ್ದಿಗೆ ಹೈಕೋರ್ಟ್ ನಿರಾಕರಿಸಿದೆ.

ಸಿಬಿಐ ತನಿಖೆಯನ್ನು  ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಗುರುವಾರ ಪ್ರಕಟಿಸಿದೆ.

ಸಿಬಿಐ ಮೂರು ತಿಂಗಳುಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆ—1988ರ ವಿವಿಧ ಕಲಂಗಳ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು.  ಈ ಪ್ರಕರಣ ಕಾನೂನು ಬಾಹಿರವಾಗಿದ್ದು, ಅದನ್ನು ರದ್ದುಪಡಿಸಬೇಕು ಎಂದು  2022ರ ಜುಲೈನಲ್ಲಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

Exit mobile version