ಕೊರಗ ಸಮುದಾಯದ ಉಪನ್ಯಾಸಕ ದಿನಕರ ಕೆಂಜೂರು ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ
ಉಡುಪಿ: ಜಿಲ್ಲೆಯ ಬಹ್ಮಾವರ ತಾಲ್ಲೂಕಿನ ಕೆಂಜೂರು ಗ್ರಾಮದ ಕಲ್ಲುಗುಡ್ಡೆಯ ದಿನಕರ ಕೆಂಜೂರು ಇವರು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಹಾಗೂ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ನಾಲೇಜ್ ಮ್ಯಾನೇಜ್‌ಮೆಂಟ್ ಪಾಲಿಸೀಸ್ ಎಂಡ್ ಪ್ರಾಕ್ಟಿಸಸ್: ಎ ಸ್ಟಡಿ ವಿದ್ ರೆಪರೆನ್ಸ್ ಟು ಕಂಪ್ಯೂಟರ್ ಸಾಫ್ಟ್ ವೇರ್ ಎಂಡ್ ಸರ್ವಿಸಸ್ ಕಂಪೆನೀಸ್ ಇನ್ ಕರ್ನಾಟಕ’ ಎಂಬ ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಕರ್ನಾಟಕ ರಾಜ್ಯದ ಅಂಚೀಕೃತ ಬುಡಕಟ್ಟು ಸಮುದಾಯವಾದ ಕೊರಗ ಸಮುದಾಯದಲ್ಲಿ ಡಾಕ್ಟರೇಟ್ ಪಡೆದ ಮೂರನೇಯವರಾಗಿದ್ದು ವಿಕಲಚೇತನ ವ್ಯಕ್ತಿಯಾಗಿದ್ದಾರೆ.
ಇವರು ಸುಕ್ರ ಕೊರಗ ಕೆಂಜೂರು ಮತ್ತು ದಿ. ಶಾಂತ ಕೆಂಜೂರು ರವರ ಪುತ್ರರಾಗಿದ್ದಾರೆ. ಡಾ. ದಿನಕರ ಕೆಂಜೂರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























