ಮಠಗಳಿಂದ ಕಮಿಷನ್ ವಸೂಲಿ: ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಬೆಂಗಳೂರು: ಮಠಗಳಿಂದಲೂ ಕಮಿಷನ್ ವಸೂಲಿ ವಿಚಾರವನ್ನು ದಿಂಗಾಲೇಶ್ವರ ಸ್ವಾಮಿಗಳು ಪ್ರಸ್ತಾಪಿಸಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟಾಗಿದೆ. ಈ ಹೇಳಿಕೆಯ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ದಿಂಗಾಲೇಶ್ವರ ಸ್ವಾಮಿಗಳು ಸರ್ಕಾರದ ಕಮಿಷನ್ ಬಗ್ಗೆ ವಿವರಗಳನ್ನು ನೀಡಿದರೆ ಸಂಪೂರ್ಣವಾಗಿ ತನಿಖೆ ಮಾಡಲಾಗುವುದು. ದಿಂಗಾಲೇಶ್ವರರು ಪರಮಪೂಜ್ಯರು, ಮಹಾತ್ಮರು, ತಪಸ್ವಿಗಳು. ಮಠಾಧೀಶರು ಹೇಳಿಕೆ ನೀಡಿದರೆ ಸಾಲುವುದಿಲ್ಲ. ಅವರು ಯಾರು, ಯಾರಿಗೆ, ಯಾವುದಕ್ಕಾಗಿ ಎಷ್ಟು ಪರ್ಸೆಂಟ್ ಹಣ ಕೊಟ್ಟಿದ್ದಾರೆ ಎಂದು ವಿವರಗಳನ್ನು ನೀಡಿದರೆ ಅದರ ಆಳಕ್ಕೆ ಹೋಗಿ ಸಂಪೂರ್ಣವಾಗಿ ತನಿಖೆ ಮಾಡಿಸುವುದಾಗಿ ಹೇಳಿದರು.
ಇನ್ನೂ ಮಠಗಳಿಗೆ ಅನುದಾನ ಮಂಜೂರಾಗಬೇಕಾದರೆ 30% ಕಮಿಷನ್ ನೀಡಬೇಕು ಎನ್ನುವ ದಿಂಗಾಲೇಶ್ವರ ಸ್ವಾಮಿ ಹೇಳಿಕೆ ಇದೀಗ ತೀವ್ರ ಚರ್ಚೆಗೊಳಗಾಗಿದೆ. ಈ ನಡುವೆ ಬ್ರಾಹ್ಮಣ ಸಂಪ್ರದಾಯದ ಮಠಗಳ ಸ್ವಾಮೀಜಿಯೊಬ್ಬರು ಮಠಕ್ಕೆ ಯಾವುದೇ ಕಮಿಷನ್ ಪಡೆದುಕೊಳ್ಳಲಾಗುತ್ತಿಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ.
ಎರಡೂ ಸಂಪ್ರದಾಯಗಳ ಮಠಗಳ ಸ್ವಾಮೀಜಿಗಳ ಹೇಳಿಕೆಯು, ಮಠಗಳಿಗೆ ಅನುದಾನ ನೀಡುವ ವಿಚಾರದಲ್ಲಿ ಜಾತಿ ತಾರತಮ್ಯ ನಡೆಸಲಾಗುತ್ತಿದೆಯೇ? ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಭಾರೀ ಚರ್ಚೆಗಳು ಆರಂಭಗೊಂಡಿದೆ. ಸರ್ಕಾರ ತಕ್ಷಣವೇ ಕಮಿಷನ್ ಸಂಪ್ರದಾಯಕ್ಕೆ ಕಡಿವಾಣ ಹಾಕಬೇಕು. ಸಾರ್ವಜನಿಕರ ಹಣ ಕಮಿಷನ್ ರೂಪದಲ್ಲಿ ರಾಜಕಾರಣಿಗಳ ಜೇಬು ತುಂಬುತ್ತಿದೆ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಾಳಿಕಟ್ಟುವ ಶುಭ ವೇಳೆ, ವರನನ್ನು ಎತ್ತಾಕೊಂಡು ಹೋದ ಪೊಲೀಸರು!
ಶಾಲೆಯ ಎದುರೇ 10ನೇ ತರಗತಿಯ ವಿದ್ಯಾರ್ಥಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಸ್ನೇಹಿತರು
ಆಕ್ಷೇಪಾರ್ಹ ಪೋಸ್ಟ್ ಹರಡಿದ ಬಜರಂಗದಳದ ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ
ಹಿಂದುತ್ವದಿಂದ ಚುನಾವಣೆ ಗೆಲ್ಲಬಹುದು ಎನ್ನುವ ಬಿಜೆಪಿಯ ನಿರೀಕ್ಷೆಗೆ ಶಾಕ್ ನೀಡಿದ ಯಡಿಯೂರಪ್ಪ ಹೇಳಿಕೆ!
ಪರ್ಸಂಟೇಜ್ ಪಿತಾಮಹಾ ಸಿದ್ದರಾಮಯ್ಯ: ಕುಮಾರಸ್ವಾಮಿ ಟ್ವೀಟ್ ಬಾಣ