ದಿವ್ಯಾಂಗ ಮಹಿಳೆಯನ್ನು ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ! | ಸಿಸಿ ಕ್ಯಾಮರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯ ಸೆರೆ

balarampura
13/08/2025

ಬಲರಾಂಪುರ: ದಿವ್ಯಾಂಗ  ಮಹಿಳೆಯನ್ನು ಬೆನ್ನಟ್ಟಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರದಲ್ಲಿ ನಡೆದಿದೆ.

ಅತ್ಯಾಚಾರಕ್ಕೂ ಮುನ್ನ ಮಹಿಳೆ ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಅಸಹಾಯಕಳಾಗಿ ಓಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ನಿವಾಸಗಳಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ.  ಸೋಮವಾರ ಮಹಿಳೆ ತನ್ನ ಚಿಕ್ಕಪ್ಪನ ಮನೆಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆಯನ್ನು ತಡೆದು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.  ಮೂರರಿಂದ ನಾಲ್ಕು ಬೈಕ್‌ ಗಳಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಮಹಿಳೆಯನ್ನು ಬೆನ್ನಟ್ಟಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ.

ಮಹಿಳೆ ನಾಪತ್ತೆಯಾದ ವೇಳೆ ಮನೆಯವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಠಾಣೆ ಬಳಿಯ ಪೊದೆಗಳಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಪ್ರಜ್ಞೆ ಮರಳಿ ಬಂದಾಗ, ಅತ್ಯಾಚಾರಕ್ಕೊಳಗಾದ ಮಹಿಳೆ ತನ್ನ ಮೇಲೆ ಬೈಕ್‌ ನಲ್ಲಿದ್ದ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದಾಳೆ. ಸದ್ಯ ಮಹಿಳೆಯ ಆರೋಗ್ಯ ಸ್ಥಿರವಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version