ಜು.18ರಂದು ಸಾಮಾಜಿಕ ಕಾರ್ಯಕರ್ತರೊಂದಿಗೆ ಮಾತುಕತೆ

ಉಡುಪಿ, ಜು.15: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿ ಹಾಗೂ ಹಿರಿಯಡ್ಕ ಸಂಸ್ಕೃತಿ ಸಿರಿ ಟ್ರಸ್ಟ್ ಸಹ ಯೋಗದಲ್ಲಿ ಸಾಮಾಜಿಕ ಕಾರ್ಯಕರ್ತರೊಂದಿಗೆ ಮಾತುಕತೆ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಜು.18ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾಜ ಸೇವೆಯ ಜೊತೆ ಮಾಧ್ಯಮದ ಸುದ್ದಿಯ ಮೂಲವಾಗಿರುವ ಜೀವ ರಕ್ಷಕ, ಮುಳುಗ ತಜ್ಞ ಈಶ್ವರ ಮಲ್ಪೆ, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಗಣೇಶ್ ರಾಜ್ ಸರಳೇಬೆಟ್ಟು ಈ ಕಾರ್ಯಕ್ರಮದಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಕಾರ್ಯಕ್ರಮವನ್ನು ಸಂಸ್ಕೃತಿ ಸಿರಿ ಟ್ರಸ್ಟ್ ನ ಆಡಳಿತ ವಿಶ್ವಸ್ಥ ಹಾಗೂ ಸಾಹಿತಿ ಪ್ರೊ.ಮುಳೀಧರ ಉಪಾಧ್ಯ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ರಜತ ಮಹೋತ್ಸವ ಸಮಿತಿ ಸಂಚಾಲಕ ಮುಹಮ್ಮದ್ ಶರೀಫ್, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಗೌರವ ಉಪಸ್ಥಿತರಿರುವರು.
ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರ ಕಾರ್ಯವೈಖರಿ ಜೊತೆ ಜಿಲ್ಲೆಯಲ್ಲಿರುವ ಕೊರತೆ, ಬೇಕಾಗಿರುವ ಅಗತ್ಯತೆ, ಸಮಸ್ಯೆಗಳು ಹಾಗೂ ಅದಕ್ಕೆ ಪರಿಹಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು. ಒಟ್ಟಾರೆಯಾಗಿ ಈ ಎಲ್ಲ ವಿಚಾರಗಳನ್ನು ಸಂಘದ ಮೂಲಕ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ಗಮನ ಸೆಳೆಯುವ ಕಾರ್ಯಕ್ರಮ ಇದಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw