ಖಾತೆ ಹಂಚಿಕೆ: ಭುಗಿಲೆದ್ದ ಅಸಮಾಧಾನ–ರಾಜೀನಾಮೆಗೆ ಮುಂದಾದ ರಾಮಲಿಂಗಾರೆಡ್ಡಿ?

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರಕ್ಕೆ ಖಾತೆ ಹಂಚಿಕೆ ಕಗ್ಗಂಟಾಗಿದ್ದು ತಮಗೆ ಸಾರಿಗೆ ಖಾತೆ ಕೊಡುವ ಲಕ್ಷಣ ಕಾಣುತ್ತಿದ್ದಂತೆಯೇ ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ ರಾಜೀನಾಮೆಗೆ ಮುಂದಾಗಿದ್ದಾರೆ.
ಇದೇ ರೀತಿ ಹಲವು ಸಚಿವರು ತಮಗೆ ಸಿಗುವ ಖಾತೆಯ ಸುಳಿವು ಸಿಗುತ್ತಿದ್ದಂತೆಯೇ ಅಸಮಾಧಾನಗೊಂಡಿದ್ದು, ಉದ್ದೇಶಪೂರ್ವಕವಾಗಿ ತಮ್ಮನ್ನು ಅವಮಾನಿಸುವ ಪ್ರಯತ್ಬವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತಮಗೆ ಸಾರಿಗೆ ಖಾತೆ ಕೊಡುವ ನಿರ್ಧಾರದ ಬಗ್ಗೆ ಕೆಂಡಾಮಂಡಲಗೊಂಡಿರುವ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ,ಇದು ತಮ್ಮನ್ನು ಅವಮಾನಿಸುವ ಯತ್ನ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ಈ ಹಿಂದೆ ನಾಲ್ಕು ವರ್ಷಕ್ಕೂ ಹೆಚ್ಚು ಕಾಲ ತಾವು ಸಾರಿಗೆ ಸಚಿವರಾಗಿ ಕೆಲಸ ಮಾಡಿದ್ದು,ಈಗ ಅದೇ ಖಾತೆಯನ್ನು ಕೊಡುವ ಅಗತ್ಯವಿರಲಿಲ್ಲ.
ಗೃಹ ಸಚಿವರಾಗಿ ಕೆಲಸ ಮಾಡಿರುವ ತಮಗೆ ಇನ್ನೂ ಮಹತ್ವದ ಖಾತೆ ನೀಡಬೇಕಿತ್ತು.ಆದರೆ ಸಾರಿಗೆ ಖಾತೆಯನ್ನೇ ಕೊಡಲು ಮುಂದಾಗಿ ತಮ್ಮನ್ನು ಅವಮಾನಿಸಲಾಗುತ್ತಿದೆ. ತಮಗಿಂತ ಕಿರಿಯರಿಗೆ ಮಹತ್ವದ ಖಾತೆಗಳನ್ನು ಕೊಟ್ಟು,ತಮಗೆ ಮಾತ್ರ ಹಿಂಬಡ್ತಿ ನೀಡುವ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ.ಇದು ಸರಿಯಲ್ಲ.
ಸಾರಿಗೆ ಖಾತೆಯನ್ನೇ ನನಗೆ ಅಂಟಿಸುವುದಾದರೆ ನನಗೆ ಸಚಿವ ಸ್ಥಾನವೇ ಬೇಡ.ತಕ್ಷಣವೇ ರಾಜೀನಾಮೆ ಕೊಟ್ಟು ಬಿಡುತ್ತೇನೆ ಎಂದು ರಾಮಲಿಂಗಾರೆಡ್ಡಿ ಅಸಮಾಧಾನ ತೋಡಿಕೊಂಡಿದ್ದಾರೆ.
ಹೀಗೆ ಖಾತೆ ಹಂಚಿಕೆಯ ವಿಷಯದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಹಲ ಸಚಿವರು ಅಸಮಾಧಾನ ವ್ಯಕ್ತಪಡಿಸತೊಡಗಿದ್ದು, ಸರಿಪಡಿಸದೆ ಹೋದರೆ ಸಿದ್ಧರಾಮಯ್ಯ ಅವರ ಸರ್ಕಾರಕ್ಕೆ ಮುಜುಗರ ಉಂಟಾಗುವುದು ಬಹುತೇಕ ಖಚಿತ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.