ಕೊರೊನಾ ಪಾಸಿಟಿವ್ ಆಗಿದ್ದ ಖ್ಯಾತ ನಟಿಯ ಆರೋಗ್ಯ  ಸ್ಥಿತಿ ಗಂಭೀರ - Mahanayaka

ಕೊರೊನಾ ಪಾಸಿಟಿವ್ ಆಗಿದ್ದ ಖ್ಯಾತ ನಟಿಯ ಆರೋಗ್ಯ  ಸ್ಥಿತಿ ಗಂಭೀರ

29/11/2020

ಮುಂಬೈ: ಕೊರೊನಾ ಪಾಸಿಟಿವ್ ಆಗಿದ್ದ ಖ್ಯಾತ ನಟಿಯೊಬ್ಬರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಅವರಿಗೆ  ಚಿಕಿತ್ಸೆ ನೀಡಲಾಗುತ್ತಿದೆ.

ಸ್ಟಾರ್ ಪ್ಲಸ್​ನ ‘ಯೆ ರಿಷ್ತಾ ಕ್ಯಾ ಕೆಹಲಾತಾ ಹೈ’ ಸೇರಿದಂತೆ ಹಲವಾರು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ದೆಹಲಿ ತೊರೆದು ಮುಂಬೈಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ದಿವ್ಯಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.  ಚಿಕಿತ್ಸೆ ನೀಡಲಾಗುತ್ತಿದ್ದರೂ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇನ್ನೂ ದಿವ್ಯಾ ಶೀಘ್ರವೇ ಗುಣಮುಖರಾಗಲಿ ಎಂದು ಅನೇಕ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. “ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿಕೊಳ್ಳಿ “ಎಂದು ನಟಿ ದಿವ್ಯಾ ಕೂಡ ಇನ್​ಸ್ಟಾಗ್ರಾಂನಲ್ಲಿ ಕೇಳಿಕೊಂಡಿದ್ದಾರೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ