ದೀಪಾವಳಿ ಕೊಡುಗೆ: ₹699ಕ್ಕೆ ಸಿಗಲಿದೆ ಜಿಯೋ ಭಾರತ್‌ 4 ಜಿ ಫೋನ್ - Mahanayaka
8:55 PM Wednesday 20 - August 2025

ದೀಪಾವಳಿ ಕೊಡುಗೆ: ₹699ಕ್ಕೆ ಸಿಗಲಿದೆ ಜಿಯೋ ಭಾರತ್‌ 4 ಜಿ ಫೋನ್

jio bharath
26/10/2024


Provided by

ನವದೆಹಲಿ : ದೇಶದ ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ ಅವರ ಕಂಪನಿ ರಿಲಯನ್ಸ್ ಜಿಯೋ ಈ ದೀಪಾವಳಿಗೆ ಜಿಯೋ ಭಾರತ್ 4 ಜಿ ಫೋನ್‌ ಗಳ ಬೆಲೆಯನ್ನು ಶೇ.30ರಷ್ಟು ಕಡಿತಗೊಳಿಸಿದೆ. ಈ ಸೀಮಿತ ಅವಧಿಯ ಕೊಡುಗೆಯ ಅಡಿಯಲ್ಲಿ, ₹999 ನ ಜಿಯೋಭಾರತ್ ಮೊಬೈಲ್ ಫೋನ್ ಈಗ ₹699ರ ವಿಶೇಷ ಬೆಲೆಗೆ ಲಭ್ಯವಿದೆ.

ಜಿಯೋಭಾರತ್ ಫೋನ್ ಅನ್ನು 123 ರೂ.ಗೆ ರೀಚಾರ್ಜ್ ಮಾಡಬಹುದು. ಈ ಮಾಸಿಕ ಟ್ಯಾರಿಫ್ ಯೋಜನೆಯಲ್ಲಿ ಅನಿಯಮಿತ ಉಚಿತ ಧ್ವನಿ ಕರೆಗಳು, 14 ಜಿಬಿ ಡೇಟಾ ಸಹ ಒಳಗೊಂಡಿದೆ.

ಜಿಯೋದ ಮಾಸಿಕ ₹123ಗಳ ರೀಚಾರ್ಜ್ ಯೋಜನೆ ಇತರ ಆಪರೇಟರ್ ಗಳಿಗಿಂತ 40 ಪ್ರತಿಶತ ಅಗ್ಗವಾಗಿದೆ. ಏಕೆಂದರೆ ಇತರ ನೆಟ್‌ ವರ್ಕ್‌ಗಳ ಫೀಚರ್ ಫೋನ್‌ ಗಳ ಮಾಸಿಕ ರೀಚಾರ್ಜ್ ಕನಿಷ್ಠ ₹ 199 ಇದೆ. ಇದು ಜಿಯೋಗಿಂತ 76 ರೂಪಾಯಿ ಹೆಚ್ಚು ದುಬಾರಿಯಾಗಿದೆ. ಅಂದರೆ, ಜಿಯೋ ಗ್ರಾಹಕರಿಗೆ ಪ್ರತಿ ರೀಚಾರ್ಜ್ ನಲ್ಲಿ ತಿಂಗಳಿಗೆ ₹ 76 ಉಳಿಯಲಿದೆ. ತಿಂಗಳಿಗೆ ₹76 ರಂತೆ 9 ತಿಂಗಳಿಗೆ ಉಳಿತಾಯ ಆಗಿವ ಮೊತ್ತವು ಫೋನ್ ಬೆಲೆಗೆ ಸಮನಾಗಲಿದೆ. ಅಂದರೆ ಜಿಯೋ ಭಾರತ್ ಫೋನ್ ಉಚಿತವಾಗಿ ಸಿಕ್ಕಂತೆ ಆಗಲಿದೆ.

2ಜಿ ಯಿಂದ 4ಜಿ ಗೆ ಅಪ್‌ಗ್ರೇಡ್ ಆಗುವ ಸುವರ್ಣ ಅವಕಾಶವನ್ನು ಜಿಯೋ ನೀಡುತ್ತಿದೆ. 455 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ ಗಳು, ಚಲನಚಿತ್ರ ಪ್ರೀಮಿಯರ್‌ ಗಳು ಮತ್ತು ಹೊಸ ಚಲನಚಿತ್ರಗಳು, ವೀಡಿಯೊ ಶೋಗಳು, ಲೈವ್ ಸ್ಪೋರ್ಟ್ಸ್ ಕಾರ್ಯಕ್ರಮಗಳು, ಜಿಯೋ ಸಿನೆಮಾ ಮುಖ್ಯಾಂಶಗಳು, ಡಿಜಿಟಲ್ ಪಾವತಿಗಳು, ಕ್ಯೂಆರ್ ಕೋಡ್ ಸ್ಕ್ಯಾ‌ನ್‌ ಗಳು ಜಿಯೋಭಾರತ್ 4 ಜಿ ಫೋನ್‌ನಲ್ಲಿ ಲಭ್ಯವಿದೆ. ಜಿಯೋಪೇ ಮತ್ತು ಜಿಯೋಚಾಟ್ ನಂತಹ ಪ್ರಿಲೋಡೆಡ್ ಅಪ್ಲಿಕೇಶನ್ ಗಳು ಸಹ ಈ ಫೋನ್‌ನಲ್ಲಿ ಲಭ್ಯವಿರುತ್ತವೆ. ಹತ್ತಿರದ ಅಂಗಡಿಗಳ ಹೊರತಾಗಿ, ಫೋನ್ ಅನ್ನು ಜಿಯೋಮಾರ್ಟ್ ಅಥವಾ ಅಮೆಜಾನ್‌ ನಿಂದ ಸಹ ಖರೀದಿಸಬಹುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ