ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿ.ಕೆ.ಶಿವಕುಮಾರ್ ಕೇಳುತ್ತಿದ್ದಾರೆ: ಸಂಸದ ಡಿ.ಕೆ.ಸುರೇಶ್ - Mahanayaka

ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿ.ಕೆ.ಶಿವಕುಮಾರ್ ಕೇಳುತ್ತಿದ್ದಾರೆ: ಸಂಸದ ಡಿ.ಕೆ.ಸುರೇಶ್

dk suresh
16/05/2023


Provided by

ನವದೆಹಲಿ: ಡಿ.ಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ನನ್ನ ಆಸೆ ಎಲ್ಲಾ ಸವಾಲುಗಳನ್ನ ಎದುರಿಸಿ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿಕೆ ಶಿವಕುಮಾರ್ ಕೇಳುತ್ತಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದರು.

ನವದೆಹಲಿಯಲ್ಲಿ ಇಂದು ಮಾತನಾಡಿದ ಡಿ.ಕೆ ಸುರೇಶ್,  ಸಂಕಷ್ಟ ಸಂದರ್ಭದಲ್ಲಿಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಜವಾದ್ದಾರಿ ನೀಡಿದರು. ಸೋನಿಯಾ ಗಾಂಧಿಯವರು ನಮಗೆ ಪಕ್ಷದ ಜವಾಬ್ದಾರಿ ನೀಡಿದ್ದರು. ನಿಮ್ಮ ಮೇಲೆ ನಂಬಿಕೆ, ವಿಶ್ವಾಸವಿದೆ ಎಂದು ಹೇಳಿದ್ದರು. ಕೊಟ್ಟ ಜವಾಬ್ದಾರಿಯನ್ನು ಡಿಕೆ ಶಿವಕುಮಾರ್ ನೆರವೇರಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು 135 ಸ್ಥಾನವನ್ನು ಗೆಲ್ಲಿಸಿ ನೀಡಿದ್ದಾರೆ. ಹಿಂಸೆ, ಕಿರುಕುಳ, ಅವಮಾನ, ನಿಂದನೆಗಳನ್ನುಡಿ.ಕೆ ಶಿವಕುಮಾರ್ ಎದುರಿಸಿದ್ದಾರೆ.

ಎಲ್ಲಾ ಸವಾಲುಗಳನ್ನು ಎದರಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿ.ಕೆ.ಶಿವಕುಮಾರ್ ಕೇಳುತ್ತಿದ್ದಾರೆ. ಮುಂದಿನ ನಿರ್ಧಾರ ಹೈಕಮಾಂಡ್​ ಬಿಟ್ಟಿದ್ದು ಎಂದು ಡಿ.ಕೆ ಸುರೇಶ್ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ