ಸರ್ಕಾರದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು: ಸಾರಿಗೆ ನೌಕರರಿಗೆ ಡಿಕೆಶಿ ಮನವಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಾರ್ವಜನಿಕರ ಬದುಕು ಗಮನದಲ್ಲಿಟ್ಟುಕೊಂಡು ಸಹಕರಿಸಿ ಎಂದು ಸಾರಿಗೆ ನೌಕರರಿಗೆ ಮನವಿ ಮಾಡಿಕೊಂಡಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಸಾರಿಗೆ ನೌಕರರ ಬೇಡಿಕೆ ತಪ್ಪು ಎಂದು ಸರ್ಕಾರ ಹೇಳುತ್ತಿಲ್ಲ, ಅವರು ಕೂಡ ಸರ್ಕಾರದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಸಾರಿಗೆ ನೌಕರರಿಗೆ ನೆರವಾಗಲು ಪ್ರಯತ್ನಿಸುತ್ತಿದ್ದಾರೆ. ನಾಗರಿಕರನ್ನ ಗಮನದಲ್ಲಿಟ್ಟುಕೊಂಡು ನಮಗೆ ಸಹಕಾರ ನೀಡಬೇಕು, ಇಂದು ಕರ್ತವ್ಯಕ್ಕೆ ಹಾಜರಾಗಿರುವ ಚಾಲಕರು ಮತ್ತು ಕಂಡೆಕ್ಟರ್ ಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು.
ಅನಗತ್ಯವಾಗಿ ಕಾನೂನಿಗೂ ಗೌರವ ನೀಡದೇ ಹಠ ಮಾಡುವುದು ಬೇಡ, ನೀವು ಸಮಾಜ ಸೇವೆ ಮಾಡುತ್ತಿದ್ದು, ನಮಗ್ಗೆ ಸಹಕಾರ ನೀಡಿ ಎಂದು ಮನವಿ ಮಾಡಿಕೊಂಡರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD