ನಿನ್ನ ಧಮ್ಕಿಗೆ ಮುಸಲ್ಮಾನರು ಹೆದರಲ್ಲ: ಕುಮಾರಸ್ವಾಮಿ ವಿರುದ್ಧ ಅಬ್ಬರಿಸಿದ ಡಿಕೆಶಿ - Mahanayaka

ನಿನ್ನ ಧಮ್ಕಿಗೆ ಮುಸಲ್ಮಾನರು ಹೆದರಲ್ಲ: ಕುಮಾರಸ್ವಾಮಿ ವಿರುದ್ಧ ಅಬ್ಬರಿಸಿದ ಡಿಕೆಶಿ

d k shivakumar
05/08/2024

ಮಂಡ್ಯ: ನೀನು ಬಿಜೆಪಿಗೆ ಹೋಗಿ ಮಂತ್ರಿಯಾದ ತಕ್ಷಣ ಯಾರನ್ನೂ ಸಂವಿಧಾನದಿಂದ ಓಡಿಸಲು ಆಗಲ್ಲ. ನಿನ್ನ ಧಮ್ಕಿಗೆ ಮುಸಲ್ಮಾನರು ಹೆದರಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಮದ್ದೂರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಜನಾಂದೋಲನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಮಾತಿನುದ್ದಕ್ಕೂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಮುಸ್ಲಿಮರು ಇಲ್ಲ ಅಂದಿದ್ರೆ ನೀವು ಎಂಎಲ್ ಎ ಆಗ್ತಿರಲಿಲ್ಲ, ನಿಮ್ಮ ತಂದೆ ಸಿಎಂ ಆಗ್ತಿರಲಿಲ್ಲ. ಈಗ ಮುಸ್ಲಿಮರಿಗೆ ವೋಟ್ ಹಾಕಿಲ್ಲ ಅಂತ ಧಮ್ಕಿ ಹಾಕ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

10 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಇಳಿಸುವುದಾಗಿ ಕುಮಾರಸ್ವಾಮಿ ಹೇಳುತ್ತಾರೆ, ಬ್ರಿಟಿಷರ ಕೈಯಲ್ಲೇ ಕಾಂಗ್ರೆಸ್ ಮುಗಿಸಲು ಆಗಲಿಲ್ಲ. ಕುಮಾರಸ್ವಾಮಿ ಕೈಯಲ್ಲಿ ಆಗುತ್ತಾ? ನಮ್ಮದು 10 ತಿಂಗಳ ಸರ್ಕಾರ ಅಲ್ಲ ಕುಮಾರಣ್ಣ, 10 ವರ್ಷದ ಸರ್ಕಾರ ಎಂದು ಪಂಚ್ ನೀಡಿದರು.

ಮುಸ್ಲಿಮರು ಇಲ್ಲ ಅಂದಿದ್ರೆ ನೀವು ಎಂಎಲ್ಎ ಆಗ್ತಿರಲಿಲ್ಲ, ನಿಮ್ಮ ತಂದೆ ಸಿಎಂ ಆಗ್ತಿರಲಿಲ್ಲ. ಈಗ ಮುಸ್ಲಿಮರಿಗೆ ವೋಟ್ ಹಾಕಿಲ್ಲ ಅಂತ ಧಮ್ಕಿ ಹಾಕ್ತಾರೆ. ನಿಮ್ಮ ತಂದೆ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದು ನೆನೆಸಿಕೊಳ್ಳಿ ಎಂದು ತೀವ್ರ ವಾಗ್ದಾಳಿ ನಡೆಸಿದರು.

ನನ್ನ ಅಧ್ಯಕ್ಷತೆಯಲ್ಲಿ 136 ಸೀಟು ಬಂತು. ನಿನ್ನ ಅಧ್ಯಕ್ಷತೆಯಲ್ಲಿ ಬರೀ 19 ಸೀಟು ಬಂದಿದೆ. ಈಗ 2 ಸೀಟು ಗೆದ್ದು ಬಿಜೆಪಿ ಬ್ಲ್ಯಾಕ್ ಮೇಲ್ ಮಾಡ್ತಿದ್ದೀಯಾ? ಆವತ್ತು ರೇವಣ್ಣಂದು ಬೇರೆ ಕುಟುಂಬ ಅಂದು ಈಗ ನನ್ನ ಕುಟುಂಬದ ಮರ್ಯಾದೆ ತೆಗೆದ ಅಂತ ಪ್ರೀತಂಗೆ ಹೇಳ್ತೀಯಾ? ಪ್ರಜ್ವಲ್ ಗೆ ಟಿಕೆಟ್ ಕೊಡಬೇಡಿ ಎಂದು ದೇವರಾಜೇಗೌಡ ಕೈಲಿ ಪತ್ರ ಬರೆಸಿದ್ದು ಯಾರು? ಸ್ವಂತ ಅಣ್ಣ, ಅಣ್ಣನ ಮಗನನ್ನೇ ಅವನು ಸಹಿಸಲ್ಲ ಎಂದು ಹಿಗ್ಗಾಮುಗ್ಗಾ ತರಾಟೆಗೆತ್ತಿಕೊಂಡರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ