ಫ್ರೆಂಡ್ಸ್ ನಡುವಿನ ವಿಷಯವನ್ನು ಇನ್ನೆಲ್ಲೋ ತೆಗೆದುಕೊಂಡು ಹೋಗಬೇಡಿ: ಗೃಹ ಸಚಿವ ಜಿ.ಪರಮೇಶ್ವರ್ ಮನವಿ

ಬೆಂಗಳೂರು: ಫ್ರೆಂಡ್ಸ್ ನಡುವಿನ ವಿಷಯವನ್ನು ಇನ್ನೆಲ್ಲೋ ತೆಗೆದುಕೊಂಡು ಹೋಗಬೇಡಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ.
ಉಡುಪಿ ಖಾಸಗಿ ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಘಟನೆ ನಡೆದ ಕಾಲೇಜಿನ ಆಡಳಿತ ವೀಡಿಯೋ ಚಿತ್ರೀಕರಣ ಮಾಡಿದ ವಿದ್ಯಾರ್ಥಿನಿಯರ ವಿರುದ್ಧ ಕ್ರಮ ಕೈಗೊಂಡಿದೆ. ಅವರನ್ನು ಸಸ್ಪೆಂಡ್ ಮಾಡಿದ್ದಾರೆ. ಯುನಿವರ್ಸಿಟಿ ಕಮಿಷನ್ ಆ್ಯಂಟಿ ರ‍್ಯಾಗಿಂಗ್ ಸಮಿತಿ ರಚಿಸಿದೆ. ನಾವು ಅಲ್ಲಿ ಅದನ್ನು ನಿರ್ವಹಿಸಬಹುದು. ಯಾವಾಗ ಇದನ್ನು ಅಗತ್ಯಕ್ಕಿಂತಲೂ ಹೆಚ್ಚಿನದಾಗಿ ಬಿಂಬಿಸಲು ಹೊರಟರೋ ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಯವುದಾಗಿ ಹೇಳಿದ್ದಾರೆ. ನಾನು ಕೂಡಾ ಸತ್ಯಾಸತ್ಯತೆ ತಿಳಿಯಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw