ಪತ್ನಿಯನ್ನು ಇಂಜೆಕ್ಷನ್ ನೀಡಿ ಹತ್ಯೆ ಮಾಡಿದ ವೈದ್ಯ!

ಬೆಂಗಳೂರು: ಸ್ವಂತ ಪತಿಯೇ ತನ್ನ ಪತ್ನಿಯನ್ನು ಇಂಜೆಕ್ಷನ್ ನೀಡಿ ಕೊಂದು ಹಾಕಿರುವ ಭೀಕರ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯಲ್ಲಿ ನಡೆದಿದೆ. ಕೃತಿಕಾ ಎಂಬ ಮಹಿಳೆಯನ್ನು ಡಾಕ್ಟರ್ ಮಹೇಂದ್ರ ಎಂಬುವವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ವೃತ್ತಿಯಲ್ಲಿ ಜನರಲ್ ಸರ್ಜನ್ ಆಗಿರುವ ಡಾ.ಮಹೇಂದ್ರರೆಡ್ಡಿ ಬಂಧಿತ ಆರೋಪಿಯಾಗಿದ್ದು, ಪತ್ನಿಗೆ ಅನಾರೋಗ್ಯ ಸಮಸ್ಯೆ ಇರುವ ಕಾರಣ ಈತ ಕೊಲೆ ಮಾಡಿದ್ದಾನೆ ಎಂಬ ಆಘಾತಕಾರಿ ವಿಷಯ ತನಿಖೆ ವೇಳೆ ಗೊತ್ತಾಗಿದೆ.
ಮೂಲಗಳ ಪ್ರಕಾರ, 2024ರ ಮೇ 26ರಂದು ಡಾ.ಮಹೇಂದ್ರರೆಡ್ಡಿ ಮತ್ತು ಡಾ.ಕೃತಿಕಾರೆಡ್ಡಿ ವಿವಾಹವಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞೆಯಾಗಿದ್ದ ಡಾ.ಕೃತಿಕಾರೆಡ್ಡಿ ಅವರಿಗೆ ಕೆಲ ದಿನಗಳಿಂದ ಆರೋಗ್ಯ ಸಮಸ್ಯೆ ಎದುರಾಗಿತ್ತು. ಅಜೀರ್ಣ, ಗ್ಯಾಸ್ಟ್ರಿಕ್, ಲೋಶುಗರ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವಿಷಯ ಮುಚ್ಚಿಟ್ಟು ಕುಟುಂಬಸ್ಥರು ಅದೇ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿದ್ದ ಡಾ.ಮಹೇಂದ್ರರೆಡ್ಡಿಗೆ ಮದುವೆ ಮಾಡಿಕೊಟ್ಟಿದ್ದರು.
ಆದರೆ, ಮದುವೆ ಬಳಿಕ ಹೆಂಡತಿಯ ಆರೋಗ್ಯ ಸಮಸ್ಯೆ ವಿಷಯ ಪತಿ ಮಹೇಂದ್ರ ರೆಡ್ಡಿಗೆ ಗೊತ್ತಾಗಿತ್ತು. ಪ್ರತಿದಿನ ವಾಂತಿ, ಇತರೆ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಯನ್ನ ಮಹೇಂದ್ರರೆಡ್ಡಿ ಇಂಜೆಕ್ಷನ್ ನೀಡಿ ಕೊಂದಿದ್ದ. ಆದರೆ ಅದನ್ನು ಸಹಜ ಸಾವು ಎಂದು ಬಿಂಬಿಸಿದ್ದ.
ವೈದ್ಯ ಮಹೇಂದ್ರ ರೆಡ್ಡಿ ತನ್ನ ವೈದ್ಯಕೀಯ ಬುದ್ದಿ ಬಳಸಿ ಕೊಲೆ ಮಾಡಿದ ಬಳಿಕ ನ್ಯಾಚುರಲ್ ಡೆತ್ ಆಗಿದೆ ಎಂದು ಎಲ್ಲರನ್ನು ನಂಬಿಸಿದ್ದ. ಇದನ್ನು ಸಹಜ ಸಾವು ಎಂದೇ ಕುಟುಂಬದವರು ನಂಬಿದ್ದರು. ಆದರೆ, ಕೃತಿಕಾ ಅವರ ಸಾವು ಸಹಜವಲ್ಲ.. ಅಸಹಜ ಎಂದು ತನಿಖೆಯಿಂದ ದೃಢಪಟ್ಟಿತ್ತು. FSL ವರದಿಯಿಂದ ಇದೊಂದು ಕೊಲೆ ಎಂಬುದು ದೃಢಪಡಿದೆ. ಎಫ್ ಎಸ್ ಎಲ್ ವರದಿ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ ಡಾ. ಮಹೇಂದ್ರ ರೆಡ್ಡಿಯನ್ನು ಬಂಧಿಸಿದ್ದಾರೆ. ಕೊಲೆಯಾದ 6 ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD