ಆಸ್ಪತ್ರೆ ಮುಂಭಾಗ ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ: ಸಾರ್ವಜನಿಕರಿಂದ ಮೆಚ್ಚುಗೆ - Mahanayaka
9:49 AM Saturday 12 - September 2026

ಆಸ್ಪತ್ರೆ ಮುಂಭಾಗ ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ: ಸಾರ್ವಜನಿಕರಿಂದ ಮೆಚ್ಚುಗೆ

tharikere
27/06/2023

ಚಿಕ್ಕಮಗಳೂರು: ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋಧಾ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರುವ ಗರ್ಭೀಣಿ ಮಹಿಳೆ ಯಶೋಧಾ, ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ಹೊರಟಿದ್ದರು. ಆಕೆ ಜೊತೆ ಬೇರೊಬ್ಬಳು ಮಹಿಳೆ ಇದ್ದಳು. ಅಜ್ಜಂಪುರದಿಂದ ತರೀಕೆರೆಗೆ ಬಂದು ಶಿವಮೊಗ್ಗ ತೆರುಳಲು ಬಸ್ ಕಾಯುವಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಸ್ಥಳದಲ್ಲಿದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ. ಆಸ್ಪತ್ರೆಗೆ ಹೊರಟ ಮಹಿಳೆ ಆಸ್ಪತ್ರೆ ಮುಟ್ಟುವ ಮುನ್ನವೇ ಆಸ್ಪತ್ರೆಯ ತುಸು ದೂರದಲ್ಲಿ ತೀವ್ರವಾದ ನೋವಿನಿಂದ ಬಳಲುತ್ತಿದ್ದಳು.

ಅದೇ ಮಾರ್ಗದಲ್ಲಿ ಹೋಗುತ್ತಿದ್ದ ತಾಲೂಕು ವೈದ್ಯಾಧಿಕಾರಿ ಆರ್. ದೇವರಾಜ್ ಆಕೆಯನ್ನ ಆಸ್ಪತ್ರೆಗೆ ಸೇರಿಸಿ ಪ್ರಸೂತಿ ವೈದ್ಯರನ್ನು ಕರೆಸಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ.‌

ಗರ್ಭಿಣಿ ಮಹಿಳೆ ಯಶೋಧ ಬಿ ನೆಗೆಟಿವ್ ರಕ್ತಕ್ಕಾಗಿಯೇ ಶಿವಮೊಗ್ಗ ಹೋಗುತ್ತಿದ್ದರು. ವೈದ್ಯರು ನಿನಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಧೈರ್ಯ ತುಂಬಿ ಹೆರಿಗೆ ಮಾಡಿಸುತ್ತಾರೆ. ಆರಂಭದ ಮೂರು ತಿಂಗಳು ಖಾಸಗಿ ಆಸ್ಪತ್ರೆಗೆ ತೋರಿಸಿದ್ದ ಗರ್ಭಿಣಿ ಯಶೋಧ ಅಲ್ಲಿ ಹೆರಿಗೆಗೆ 30,000 ಹಣ ಕೇಳಿದರು ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯರ ಕೆಲಸಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‌ ಮಹಿಳೆ ಯಶೋಧ ಕೂಡ ತರೀಕೆರೆ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ.‌

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler