ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಮಾನವ ಅಂಗಾಂಗ ಸಾಗಣೆ - Mahanayaka

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಮಾನವ ಅಂಗಾಂಗ ಸಾಗಣೆ

doctors who performed organ transplants in namma metro
02/08/2025


Provided by

ಬೆಂಗಳೂರು: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಮಾನವ ಅಂಗಾಂಗ ಸಾಗಣೆ ಮಾಡಲಾಗಿದೆ. ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ ಆಸ್ಪತ್ರೆಗೆ ಅಂಗಾಂಗ ಸಾಗಿಸಲಾಯಿತು. ನಮ್ಮ ಮೆಟ್ರೋದಲ್ಲಿ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ.

ಶುಕ್ರವಾರ, ಆಗಸ್ಟ್ 1, 2025ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ ಆಸ್ಪತ್ರೆಯಿಂದ ವೈಟ್‌ ಫೀಲ್ಡ್ ಮೆಟ್ರೋ ನಿಲ್ದಾಣಕ್ಕೆ ಆಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ಸಾಗಿಸಲಾಯಿತು.

ಮೆಟ್ರೋ ನಿಲ್ದಾಣಕ್ಕೆ ತಲುಪಿದ ತಕ್ಷಣ, ಸಹಾಯಕ ಭದ್ರತಾ ಅಧಿಕಾರಿ (ASO) ಮತ್ತು ಮೆಟ್ರೋ ಸಿಬ್ಬಂದಿ ತಂಡವನ್ನು ಸ್ವೀಕರಿಸಿ, ದಾಖಲೆ ಕಾರ್ಯ ಮತ್ತು ಭದ್ರತಾ ಪರಿಶೀಲನೆಗಳನ್ನು ಸಂಯೋಜಿಸಿದರು.

ಆ ಬಳಿಕ, ಯಕೃತ್ತನ್ನು ಹೊತ್ತ ಮೆಟ್ರೋ ರೈಲು ರಾತ್ರಿ 8:42ಕ್ಕೆ ವೈಟ್ ಫೀಲ್ಡ್ ನಿಲ್ದಾಣದಿಂದ ಹೊರಟು, ರಾತ್ರಿ 9:48ಕ್ಕೆ ರಾಜರಾಜೇಶ್ವರಿ ನಗರ (RR ನಗರ) ಮೆಟ್ರೋ ನಿಲ್ದಾಣಕ್ಕೆ ತಲುಪಿತು.

ಅಲ್ಲಿ ಮತ್ತೊಬ್ಬ ASO ಮತ್ತು ಮೆಟ್ರೋ ಸಿಬ್ಬಂದಿ ವೈದ್ಯಕೀಯ ತಂಡವನ್ನು ಸ್ವಾಗತಿಸಿ, ಕಾಯುತ್ತಿರುವ ಆಂಬ್ಯುಲೆನ್ಸ್‌ ಗೆ ವರ್ಗಾವಣೆ ಮಾಡುವಲ್ಲಿ ನೆರವಾದರು. ಅಂಗಾಂಗ ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಸಮಯಕ್ಕೆ ಅಂಗವನ್ನು ಸ್ಪರ್ಶ ಆಸ್ಪತ್ರೆಗೆ ಸುರಕ್ಷಿತವಾಗಿ ತಲುಪಿಸಲಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ