10:32 PM Wednesday 20 - August 2025

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah
01/07/2024

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದರು.
ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ.

ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು. ಇದು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗಗಳನ್ನು ತಡೆಗಟ್ಟುವ , ರೋಗಿಗಳ ಸಂಖ್ಯೆಯನ್ನು ಕಡಿಮೆಮಾಡಬಹುದು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕರೋನಾ ಸಂದರ್ಭದಲ್ಲಿ ವೈದ್ಯರ ಸೇವೆ ಮರೆಯಲಾಗದು. ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ವೈದ್ಯೋ ನಾರಾಯಣೋ ಹರಿಃ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು ಎಂದರು. ಕರೋನಾ ಸಂದರ್ಭದಲ್ಲಿ. ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವ ಸೇವೆಯನ್ನು ಮರೆಯಲಿ ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ ಎಂದರು.

ಸಮಾಜದ ಆರೋಗ್ಯ ಕಾಪಾಡಲು ಸರ್ಕಾರವೂ ಪ್ರಯತ್ನ ಪಡುತ್ತಿದೆ. ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿವೆ ಎಂದರು.
ವೈದ್ಯರು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಹೆಚ್ಚು ಬರುತ್ತಾರೆ. ವೈದ್ಯರು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಪ್ರತಿ ವೈದ್ಯರೂ ಮಾಡಬೇಕು ಎಂದರು.

ಸಿಡುಬು, ಪ್ಲೇಗು, ಪೋಲಿಯೋ ಮುಂತಾದ ಕಾಯಿಲೆಗಳು ನಿರ್ಮೂಲನೆಯಾಗಿದ್ದು, ಕೆಲವು ನಿಯಂತ್ರಣಕ್ಕೆ ಬಂದಿವೆ. ಇವನ್ನೂ ನಿರ್ಮೂಲನೆ ಮಾಡಲು ಸಾಧ್ಯವಿದೆ. ವಿಜ್ಞಾನ ತಂತ್ರಜ್ಞಾನ ಬೆಳೆದಂತೆಲ್ಲಾ ಕಾಯಿಲೆಗಳ ನಿರ್ಮೂಲನೆ ಹೆಚ್ಚು ಸಾಧ್ಯವಾಗುತ್ತಿದೆ ಎಂದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version