ಅಮಿತ್ ಶಾಗೆ, ದೇವೇಂದ್ರ ಫಡ್ನವೀಸ್ ಗೆ ಈ ಪ್ರಶ್ನೆ ಕೇಳುವ ಧಮ್ ಇದೆಯಾ? ಸುನೀಲ್ ಕುಮಾರ್ ಗೆ ಪಂಚ್ ಮೇಲೆ ಪಂಚ್ ನೀಡಿದ ಸಿಎಂ ಸಿದ್ದರಾಮಯ್ಯ
![siddaramaiah](https://www.mahanayaka.in/wp-content/uploads/2025/01/siddaramaiah.jpg)
ಬೆಂಗಳೂರು: ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ಸಂದರ್ಭದಲ್ಲಿ, ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವುದರ ವಿರುದ್ಧ ಹೇಳಿಕೆ ನೀಡಿದ್ದ ಮಾಜಿ ಸಚಿವ ಸುನೀಲ್ ಕುಮಾರ್ ಗೆ ಸಿಎಂ ತಿರುಗೇಟು ನೀಡಿದರು.
ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ? ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ–ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ ಎಂದು ಟಾಂಗ್ ನೀಡಿದರು.
ಲಾಠಿ–ದೊಣ್ಣೆ, ಕತ್ತಿ–ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: