ಹಸೆಮಣೆ ಏರಲು ಸಜ್ಜಾದ ಡಾಲಿ ಧನಂಜಯ್
ಸ್ಯಾಂಡಲ್ ವುಡ್ ನ ಹ್ಯಾಂಡಸಮ್ ನಟ ಡಾಲಿ ಧನಂಜಯ್ ಹಸೆಮಣೆ ಏರುತ್ತಿದ್ದಾರೆ. ಮದುವೆ ಯಾವಾಗ ಅಂತ ಕೇಳುತ್ತಿದ್ದವರಿಗೆ ಕೊನೆಗೂ ಡಾಲಿ ಧನಂಜಯ ಉತ್ತರ ನೀಡಿದ್ದಾರೆ.
ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಡಾಳಿ ಧನಂಜಯ್ ತಮ್ಮ ಸಂಗಾತಿಯನ್ನು ಪರಿಚಯ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡು ತಾನು ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾರೆ.
ಡಾಲಿ ಮದುವೆಯಾಗುತ್ತಿರುವ ಹುಡುಗಿಯ ಹೆಸರು ಧನ್ಯತಾ. ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಡಾಲಿ ಅನ್ನು ವರಿಸುತ್ತಿದ್ದಾರೆ.
ಡಾಲಿ ಮತ್ತು ಧನ್ಯತಾ ಇಬ್ಬರಿಗೂ ಅನೇಕ ವರ್ಷಗಳ ಪರಿಚಯ. ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಸುಂದರವಾಗಿ ಕಂಗೊಳಿಸುತ್ತಿದ್ದಾರೆ. ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: