ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಇಫ್ತಾರ್ ಕೂಟ: ಅಮೆರಿಕ ಮುಸ್ಲಿಮರಿಗೆ ಧನ್ಯವಾದ - Mahanayaka

ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ನೇತೃತ್ವದಲ್ಲಿ ಇಫ್ತಾರ್ ಕೂಟ: ಅಮೆರಿಕ ಮುಸ್ಲಿಮರಿಗೆ ಧನ್ಯವಾದ

28/03/2025

ಅಮೆರಿಕ ಅಧ್ಯಕ್ಷ ಶ್ವೇತಭವನದಲ್ಲಿ ಟ್ರಂಪ್ ಇಫ್ತಾರ್ ಕೂಟ ಆಯೋಜಿಸಿದ್ದರು. ತಮ್ಮ ಸರ್ಕಾರವು ಮುಸ್ಲಿಂ ಸಮುದಾಯಕ್ಕೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ ಮತ್ತು ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸಲು ನಿರಂತರ ರಾಜತಾಂತ್ರಿಕತೆಯಲ್ಲಿ ತೊಡಗಿದೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ ಮುಸ್ಲಿಂ ಅಮೆರಿಕನ್ನರಿಗೆ ಧನ್ಯವಾದ ಅರ್ಪಿಸಿದರು.

ಗಾಜಾದ ಮೇಲೆ ಇಸ್ರೇಲ್ ಮತ್ತೆ ಭೀಕರ ಬಾಂಬ್ ದಾಳಿಯನ್ನು ಪ್ರಾರಂಭಿಸಿದ್ದು, ಕದನ ವಿರಾಮ ಬಹುತೇಕ ಕೊನೆಗೊಂಡಂತಾಗಿದೆ. ಅಲ್ಲಿ ಮತ್ತೆ ಯುದ್ಧ ಆರಂಭವಾಗಿರುವ ಮಧ್ಯದಲ್ಲಿ ಶ್ವೇತಭವನದಲ್ಲಿ ಇಫ್ತಾರ್ ಔತಣಕೂಟ ನಡೆದಿದೆ. 2018 ರಲ್ಲಿ ಅಧ್ಯಕ್ಷ ಟ್ರಂಪ್ ಮೊದಲ ಬಾರಿಗೆ ಪವಿತ್ರ ರಂಜಾನ್ ತಿಂಗಳನ್ನು ಆಚರಿಸಲು ಇಫ್ತಾರ್ ಕೂಟವನ್ನು ಆಯೋಜಿಸಿದ್ದರು. ಶ್ವೇತಭವನದ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು, ರಾಜತಾಂತ್ರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಭಾಗವಹಿಸಿದ್ದರು.

ನವೆಂಬರ್​ ತಿಂಗಳಲ್ಲಿ ಮುಸ್ಲಿಂ ಸಮುದಾಯವು ನನ್ನ ಬೆಂಬಲಕ್ಕೆ ಬಂದಿತ್ತು. ಈಗ ಅಧ್ಯಕ್ಷನಾಗಿರುವ ನಾನು ನಿಮ್ಮ ಜೊತೆಗಿರುತ್ತೇನೆ. ಇದು ನಿಮಗೆ ಗೊತ್ತಿದೆ ಎಂದು ಭಾವಿಸುತ್ತೇನೆ. ನಾವು ಮುಸ್ಲಿಂ ಸಮುದಾಯಕ್ಕೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ.


Provided by

 

ನಮ್ಮ ಆಡಳಿತವು ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಯನ್ನು ತರಲು ನಿರಂತರ ರಾಜತಾಂತ್ರಿಕತೆಯಲ್ಲಿ ತೊಡಗಿದೆ. ಐತಿಹಾಸಿಕ ಒಪ್ಪಂದಗಳನ್ನು ಮಾಡಿಕೊಳ್ಳುತ್ತಿದೆ. ಇದೆಲ್ಲವನ್ನು ಮಾಡಲು ಅಸಾಧ್ಯ ಎಂದು ಹೇಳುತ್ತಿದ್ದರು. ಆದರೆ, ನಾವು ಅಂಥ ಕೆಲಸಗಳನ್ನು ಸಾಧ್ಯವಾಗಿಸುತ್ತಿದ್ದೇವೆ. ನಿಮಗೆ ತಿಳಿದಿರುವಂತೆ, ಬೈಡನ್ ಅಂಥ ಯಾವ ಕೆಲಸಗಳನ್ನೂ ಮಾಡಲಿಲ್ಲ” ಎಂದು ಟ್ರಂಪ್ ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ