ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ಸಿಎಂ ಸಿದ್ದರಾಮಯ್ಯ - Mahanayaka

ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ಸಿಎಂ ಸಿದ್ದರಾಮಯ್ಯ

siddaramaiah
29/06/2023


Provided by

ಬೆಂಗಳೂರು: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.


Provided by

ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ  ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ನಮ್ಮ ನಮ್ಮಲ್ಲೇ ದ್ವೇಷ ಹುಟ್ಟುಹಾಕುವ ಅನೇಕ ಶಕ್ತಿಗಳಿವೆ.  ಆ ಶಕ್ತಿಗಳು  ಉದ್ದೇಶಪೂರ್ವಕವಾಗಿಯೇ ಇದನ್ನು ಮಾಡುತ್ತವೆ. ಅದಕ್ಕೆ ನಾವು ಸೊಪ್ಪು ಹಾಕುವುದಾಗಲಿ, ಮಹತ್ವ ನೀಡುವುದಾಗಲಿ ಮಾಡಬಾರದು. ಮನುಷ್ಯರು  ಪ್ರೀತಿ, ವಿಶ್ವಾಸದಿಂದ , ಮನುಷ್ಯರಂತೆ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಿದೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಜನತೆಯೂ  ಅಭಿವೃದ್ಧಿ ಯಾಗಬೇಕು. ದೇವರು ಎಲ್ಲರಿಗೂ ಸದ್ಭುದ್ದಿ ನೀಡಿ ಮನುಷ್ಯರಾಗಿ ಬಾಳುವ ಗುಣವನ್ನು ನೀಡಲಿ ಎಂದರು.


Provided by

ತ್ಯಾಗದ ಸಂಕೇತ:

ರಾಜ್ಯದ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಬಕ್ರೀದ್ ಹಬ್ಬ ತ್ಯಾಗದ ಸಂಕೇತ.  ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿರುವುದಾಗಿ ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ