9:51 AM Wednesday 20 - August 2025

ಬೆದರಿಕೆ: ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಖಲಿಸ್ತಾನಿ ಭಯೋತ್ಪಾದಕನಿಂದ ಬೆದರಿಕೆ

05/11/2023

ಖಲಿಸ್ತಾನಿ ಭಯೋತ್ಪಾದಕ ಗುರ್ ಪತ್ವಂತ್ ಸಿಂಗ್ ಪನ್ನುನ್ ಅವರು ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಪ್ರಯಾಣಿಸಿದ್ರೆ ಹುಷಾರ್ ಎಂದು ಜನರಿಗೆ ಬೆದರಿಕೆ ಹಾಕುತ್ತಿರುವ ಹೊಸ ವೀಡಿಯೊ ವೈರಲ್ ಆಗಿದೆ. ನವೆಂಬರ್ 19 ರಂದು ಏರ್ ಇಂಡಿಯಾ ಮೂಲಕ ಹಾರಾಟ ನಡೆಸದಂತೆ ನಾವು ಸಿಖ್ ಜನರನ್ನು ಕೇಳುತ್ತಿದ್ದೇವೆ. ಜಾಗತಿಕ ದಿಗ್ಬಂಧನ ಉಂಟಾಗುತ್ತದೆ. ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವಕ್ಕೆ ಅಪಾಯವಿದೆ ಎಂದು ಪನ್ನುನ್ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ ಹೇಳಿದ್ದಾರೆ.

ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣವನ್ನು ನವೆಂಬರ್ 19 ರಂದು ಮುಚ್ಚಲಾಗುವುದು ಮತ್ತು ಅದರ ಹೆಸರನ್ನು ಬದಲಾಯಿಸಲಾಗುವುದು ಎಂದು ಪನ್ನುನ್ ಹೇಳಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ ನ ಅಂತಿಮ ಪಂದ್ಯ ಇದೇ ದಿನ ನಡೆಯಲಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಒತ್ತಿ ಹೇಳಿದ್ದಾನೆ.
ಅಕ್ಟೋಬರ್ 10 ರಂದು ನಿಷೇಧಿತ ಯುಎಸ್ ಮೂಲದ ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್ ಜೆ) ಸಂಘಟನೆಯ ಮುಖ್ಯಸ್ಥರಾಗಿರುವ ಪನ್ನುನ್, ಇಸ್ರೇಲ್-ಫೆಲೆಸ್ತೀನ್ ಯುದ್ಧದಿಂದ ಕಲಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆದರಿಕೆ ಹಾಕಿದ್ದರು.

ಇತ್ತೀಚಿನ ಸುದ್ದಿ

Exit mobile version