ಜೋಡಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಜೋಡಿ ಕೊಲೆ ಮಾಡಿದ್ದ ಆರೋಪಿತರನ್ನು ಅಮೃತಹಳ್ಳಿ ಪೊಲೀಸರು 7 ಗಂಟೆ ಅವಧಿಯೊಳಗೆ ಬಂಧಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪಾ ಎಕ್ಸೆನ್ನನ್ ನಲ್ಲಿ ಜುಲೈ 11ರಂದು ಬ್ರಾಡ್ ಬ್ಯಾಂಡ್ ಕಂಪನಿಯ ಇಬ್ಬರು ಮಾಲೀಕರನ್ನು ಹಳೆಯ ದ್ವೇಷದ ಕಾರಣದಿಂದ ಸಂಜೆ 4.00 ಗಂಟೆ ಸಮಯದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿರುವ ಪ್ರಕರಣ ದಾಖಲಾಗಿತ್ತು.
ಅಮೃತಹಳ್ಳಿ ಪೊಲೀಸರು ಆರೋಪಿಗಳ ಪತ್ತೆಗಾಗಿ 5 ವಿಶೇಷ ತಂಡ ರಚಿಸಿ, ತ್ವರಿತ ಕಾರ್ಯಾಚರಣೆ ನಡೆಸಿ ಅದೇ ದಿನ ರಾತ್ರಿ 11 ಗಂಟೆ ಸಮಯದಲ್ಲಿ ಕುಣಿಗಲ್ ಬಳಿ 3 ಜನ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರು ನಗರ, ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲಕ್ಷ್ಮೀಪ್ರಸಾದ್ ಬಿ.ಎಂ, ಐಪಿಎಸ್ ಮಾರ್ಗದರ್ಶನದಲ್ಲಿ, ಸಂಪಿಗೆಹಳ್ಳಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಂಗಪ್ಪ ಟಿ ನೇತೃತ್ವದಲ್ಲಿ, ಅಮೃತಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಗುರುಪ್ರಸಾದ್ ಜಿ, ಪಿ.ಎಸ್.ಐ ಹಾಗೂಸಿಬ್ಬಂದಿ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw