ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

dr arun k
05/09/2023

ಉಡುಪಿ: ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕರಾವಳಿ ಕಾವಲು ಪೊಲೀಸ್ ಇದರ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಸಿಟಿ ಸೆಂಟ್ರಲ್ ಡಿವಿಜನ್ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇವರಿಂದ ತೆರವಾದ ಸ್ಥಾನಕ್ಕೆ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಅದೇ ರೀತಿ ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಎಸ್ ಪಿ ನಿಕ್ಕಮ್ ಪ್ರಕಾಶ್ ಅವರನ್ನು ವೈಯರ್ ಲೆಸ್ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version