ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರಿಗೆ BVSನಿಂದ ಸನ್ಮಾನ - Mahanayaka

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರಿಗೆ BVSನಿಂದ ಸನ್ಮಾನ

bvs
27/01/2023

ಭಾರತೀಯ ವಿದ್ಯಾರ್ಥಿ ಸಂಘ(BVS) ಸಂವಿಧಾನ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರಿಗೆ ಸನ್ಮಾನಿಸಿ ಗೌರವಿಸಿತು.

ಕಾರ್ಯಕ್ರಮವನ್ನು ‘ಪ್ರಜಾವಾಣಿ’ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟ ಉದ್ಘಾಟಿಸಿದರು. ವಿಚಾರವಾದಿಗಳೂ ಸಾಹಿತಿಗಳೂ ಆದ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ, ವಿಮರ್ಶಕ ಡಾ.ಬೇಲೂರು ರಘುನಂದನ್, ನಿವೃತ್ತ ಅಧಿಕಾರಿಗಳಾದ ಬಾಬುರಾವ್ ಮುಡಬಿ IAS ಹಾಗೂ  ಮರಿಸ್ವಾಮಿ IPS, ವಕೀಲರು ಬಿಪಿಎಸ್ ಅಧ್ಯಕ್ಷ ಹರಿರಾಮ್ ಎ., ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು.

ಬಿವಿಎಸ್ ರಾಜ್ಯ ಸಂಯೋಜಕ ಡಾ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಅಕ್ಕ IAS ಅಕಾಡೆಮಿ ನಿರ್ದೇಶಕರಾದ ಡಾ.ಶಿವಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಅವರ ಶ್ರೀಮತಿಯವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ