3:47 AM Thursday 15 - January 2026

ಡ್ರಗ್ಸ್​ ದಂಧೆ: ವಿದೇಶಿ ಪ್ರಜೆಗಳು ಸೇರಿ ನಾಲ್ವರು ಆರೋಪಿಗಳ ಬಂಧನ

arrest
06/03/2022

ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಓರ್ವ ಮಾದಕ ವ್ಯಸನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಯಲಹಂಕ‌ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಉಡೇ ಉಡೇ ಊಜಾ(36), ಎಕೆಚುಕ್ವು ಡೇನಿಯಲ್(39), ತಸ್ಲೀಂ(20), ಮೊಹಮ್ಮದ್ ಉಮರ್ ಮುಕ್ತಿಯಾರ್(23) ಬಂಧಿತ ಆರೋಪಿಗಳಾಗಿದ್ದಾರೆ. ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 2.85 ಲಕ್ಷ ರೂ. ಮೌಲ್ಯದ 105 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ಅನೂಪ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಕಲುಷಿತ ನೀರು ಸೇವನೆ: 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಾರ್ಯಾಚರಣೆ ವೇಳೆ ನಾಲ್ಕನೇ ಅಂತಸ್ತಿನಿಂದ ಬಿದ್ದ ಅಗ್ನಿಶಾಮಕ ಸಿಬ್ಬಂದಿ

ಸ್ನೇಹಿತನೊಂದಿಗೆ ಹೊಟೇಲ್‍ನಲ್ಲಿ ತಂಗಿದ್ದ ಯುವತಿ ನಿಗೂಢ ಸಾವು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ನಾಳೆ, ನಾಡಿದ್ದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಮಹಿಳೆಯರಿಗೆ ವಾಟ್ಸಾಪ್‌ ನಲ್ಲಿ ಅಶ್ಲೀಲ ಸಂದೇಶ ಕಳಿಸಿ ಪೊಲೀಸರಿಗೆ ಸವಾಲು ಹಾಕಿದಾತನ ಅರೆಸ್ಟ್

 

ಇತ್ತೀಚಿನ ಸುದ್ದಿ

Exit mobile version