ರಕ್ಷಣಾ ಸಂಶೋಧನಾ ಸಂಸ್ಥೆಯಲ್ಲಿ 200 ಹುದ್ದೆಗಳ ಅವಕಾಶ : ಅರ್ಜಿ ಸಲ್ಲಿಸಲು ಅರ್ಹತೆಗಳೇನು?
DRDO Apprenticeship Recruitment 2024 – ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಡಿಆರ್‌ಡಿಓ ಅಧಿಸೂಚನೆ ಪ್ರಕಟಿಸಿದೆ. ಹಾಗಿದ್ದರೆ ಯಾವೆಲ್ಲಾ ಹುದ್ದೆಗಳು ಖಾಲಿ ಇವೆ? ಅರ್ಜಿ ಹೇಗೆ ಸಲ್ಲಿಸಬೇಕು? ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ.
DRDOದಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಒಟ್ಟು 200 ಹುದ್ದೆಗಳು ಖಾಲಿ ಇದ್ದು, ಹುದ್ದೆಗಳ ವಿಂಗಡಣೆಯನ್ನು ಈ ಕೆಳಗಿನಂತೆ ಮಾಡಲಾಗಿದೆ.
* ಪದವೀಧರ ಅಪ್ರೆಂಟಿಸ್ ಹುದ್ದೆಗಳು – 40
* ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳು – 40
* ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು – 120
ಅಧಿಸೂಚನೆಯ ಪ್ರಕಾರ ಇರಬೇಕಾದ ಅರ್ಹತೆಗಳು :
ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು. ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಂಬಂಧಪಟ್ಟ ವಿಷಯಗಳಲ್ಲಿ ಡಿಪ್ಲೋಮಾ ಮುಗಿಸಿರಬೇಕು. ಇನ್ನು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಂಬಂಧಪಟ್ಟ ವಿಭಾಗದಲ್ಲಿ ಐಟಿಐ ಮುಗಿಸಿರಬೇಕು.
ವಯೋಮಿತಿ ಅರ್ಹತೆಗಳು – ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ನೀವು ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗಿನ ಅಧಿಕೃತ ಜಾಲತಾಣದ ಲಿಂಕ್ ಗೆ ಭೇಟಿ ನೀಡಿ ನೊಂದಾಯಿಸಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 16, 2024ಆಗಿರುತ್ತದೆ. ಆದಕಾರಣ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಈ ನಿಗದಿತ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿರಿ.
ಅಧಿಕೃತ ವೆಬ್ ಸೈಟ್ ಲಿಂಕ್: nats.education.gov.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: