ಚಿಕ್ಕಮಗಳೂರು ತಾಲೂಕಿನ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿ - Mahanayaka

ಚಿಕ್ಕಮಗಳೂರು ತಾಲೂಕಿನ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿ

chikkamagaluru news
05/08/2023


Provided by

ಚಿಕ್ಕಮಗಳೂರು ತಾಲೂಕಿನ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿಯಾಗಿದ್ದು, ಸಾಂಪ್ರದಾಯಿಕ ಉಡುಗೆಯಲ್ಲಿ ದೇವಾಲಯಕ್ಕೆ ಆಗಮಿಸಲು ಸೂಚನೆ ನೀಡಲಾಗಿದೆ.

ಧಾರ್ಮಿಕದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಈ ಸೂಚನೆ ನೀಡಿದ್ದು, ಸ್ಕರ್ಟ್, ಮಿಡಿ, ಸ್ಲೀವ್ ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನೂ, ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ ಕೂಡ ತರುವಂತಿಲ್ಲ, ದೇವಾಲಯದೊಳಗೆ ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ.

ಪ್ರತೀ ವರ್ಷ ದೀಪಾವಳಿ ಸಂದರ್ಭದಲ್ಲಿ  ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸ್ತಾರೆ,  ಪ್ರತಿವರ್ಷ ಭಕ್ತರು ದೇವೀರಮ್ಮನ ಬೆಟ್ಟ ಹತ್ತುತ್ತಾರೆ.  ಮಧ್ಯರಾತ್ರಿಯೇ ಪಿರಮಿಡ್ ಆಕಾರದ ಬೆಟ್ಟವನ್ನು ಹತ್ತಿ ಭಕ್ತಿ ಸಮರ್ಪಿಸುತ್ತಾರೆ, ಇಲ್ಲಿನ ಇನ್ನೊಂದು ವಿಶೇಷ ಅಂದ್ರೆ, ಮಕ್ಕಳಿಂದ-ವೃದ್ಧರವರೆಗೂ ಬೆಟ್ಟ ಹತ್ತಿ ಬೆಟ್ಟದ ತಾಯಿಗೆ ಕೈಮುಗಿಯುತ್ತಾರೆ.

ಯುವಕ-ಯುವತಿಯರು ಬರ್ತಾರೆ, ಅವರಲ್ಲಿ ಪ್ರೇಮಿಗಳು ಇರ್ತಾರೆ,  ಯಾರೇ ಬಂದರೂ ಸಾಂಪ್ರಾದಾಯಿಕ ಉಡುಗೆಯಲ್ಲೇ ಬರಬೇಕೆಂದು ದೇವಾಲಯ ಸೂಚನೆ ನೀಡಿದೆ. ಅಲ್ಲದೇ,  ದೇವಾಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್, ರೀಲ್ಸ್ ಗೆ ಅವಕಾಶವಿಲ್ಲ ಎಂದು ಸೂಚನೆ ನೀಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ