ಮಲೆನಾಡಲ್ಲಿ ಮಳೆ–ಗಾಳಿ ಅಬ್ಬರ: ಚಾಲಕನ ನಿಯಂತ್ರಣ ಕಳೆದುಕೊಂಡು ಗದ್ದೆಗಿಳಿದ ಕಾರು!

ಕೊಟ್ಟಿಗೆಹಾರ: ಮಲೆನಾಡಲ್ಲಿ ಮಳೆ–ಗಾಳಿ ಅಬ್ಬರ ಹೆಚ್ಚಾಗಿದ್ದು, ಮಳೆಯ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಗದ್ದೆಗೆ ಜಾರಿ ಬಿದ್ದ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ಈ ಘಟನೆ ನಡೆದಿದ್ದು, ಧರ್ಮಸ್ಥಳದಿಂದ ತುಮಕೂರು ಜಿಲ್ಲೆಯ ಶಿರಾಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಗದ್ದೆಗೆ ಇಳಿದಿದೆ.
ಕಾರಿನಲ್ಲಿ ಐವರಿದ್ದು, ಇವರ ಪೈಕಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಬಣಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw