ಚಲಿಸುತ್ತಿದ್ದ ಬಸ್ ನ ಚಾಲಕನಿಗೆ ಹೃದಯಾಘಾತ: ಚಾಲಕ, ಪಾದಚಾರಿ ಮಹಿಳೆ ಸಾವು - Mahanayaka

ಚಲಿಸುತ್ತಿದ್ದ ಬಸ್ ನ ಚಾಲಕನಿಗೆ ಹೃದಯಾಘಾತ: ಚಾಲಕ, ಪಾದಚಾರಿ ಮಹಿಳೆ ಸಾವು

h d kote
03/04/2025

ಮೈಸೂರು: ಚಲಿಸುತ್ತಿದ್ದ ಬಸ್ ನ ಚಾಲಕನಿಗೆ ಹೃದಯಾಘಾತವಾಗಿದ್ದು, ಪರಿಣಾಮವಾಗಿ ಪಾದಚಾರಿ ಮಹಿಳೆಗೆ ಬಸ್ ಡಿಕ್ಕಿಯಾಗಿದ್ದು, ಬಸ್ ನ ಚಾಲಕ ಹಾಗೂ ಮಹಿಳೆ ಇಬ್ಬರೂ  ಸಾವನ್ನಪ್ಪಿದ್ದಾರೆ.

ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮತ್ತು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆ ಕೆಎಸ್ ಆರ್ ಟಿಸಿ ಬಸ್ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದೆ. ಬಸ್ ನ ಸ್ಟೇರಿಂಗ್ ಮೇಲೆಯೇ ಚಾಲಕ ಪ್ರಜ್ಞೆ ತಪ್ಪಿಬಿದ್ದಿದ್ದಾನೆ.

ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಪಾದಚಾರಿ ಲಕ್ಷ್ಮಮ್ಮನಿಗೆ ಡಿಕ್ಕಿ ಹೊಡೆದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಮೀಪದ ಜಮೀನೊಂದಕ್ಕೆ ನುಗ್ಗಿದೆ.

ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅದೃಷ್ಟವಶಾತ್  ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನಿಗೆ ಹೃದಯಾಘಾತವಾಗಿರುವ ವಿಚಾರ ತಿಳಿಯದೇ ಗ್ರಾಮಸ್ಥರು ಕೆಲ ಕಾಲ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಘಟನೆ ಸಂಬಂಧ ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ