12:12 AM Saturday 23 - August 2025

200 ಅಡಿ ಪ್ರಪಾತಕ್ಕೆ ಬಿದ್ದ ಕಾರು ಚಾಲಕ ಸ್ಥಳದಲ್ಲೇ ಸಾವು

chikkamagaluru
26/10/2023


ಕೊಟ್ಟಿಗೆಹಾರ:  ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ನಡೆದಿದೆ.

ರಂಜನ್ (38) ಮೃತ ಚಾಲಕ ಎಂದು ಗುರುತಿಸಲಾಗಿದೆ. ತಡೆಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ಈ ಅವಘಡ ಸಂಭವಿಸಿದೆ. ಈ ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಿಕೊಂಡರೂ ಸಂಬಂಧಪಟ್ಟವರು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಘಟನೆಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಮೃತ ರಂಜನ್ ಅವರು ಜನ್ನಪುರದಲ್ಲಿ ಹೋಟೆಲ್ ನಡೆಸುತ್ತಿದ್ದು, ಅಣಜೂರು ಜಯಮ್ಮನಾಗೇಶರವರ ಪುತ್ರರಾಗಿದ್ದಾರೆ.  ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version