ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಚಾಲಕನಿಗೆ ಸಂಕಷ್ಟ!

bus
24/07/2023

ಮೊಬೈಲ್ ನೋಡುತ್ತಾ ಬಸ್ ಚಲಾಯಿಸಿದ ಖಾಸಗಿ ಸಿಟಿ ಬಸ್ಸೊಂದರ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಿಂದ ತಲಪಾಡಿ ನಡುವೆ ಓಡಾಟ ನಡೆಸುವ ರೂಟ್ ನಂಬ್ರ 42ರ ಖಾಸಗಿ ಸಿಟಿ ಬಸ್ಸೊಂದರ ಚಾಲಕನೊಬ್ಬ ಒಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಅದನ್ನು ನೋಡುತ್ತಲೇ ಬಸ್ ಚಲಾಯಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ಬಸ್ಸನ್ನು ಪತ್ತೆ ಹಚ್ಚಿ ಅದರ ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಆತನ ಡ್ರೈವಿಂಗ್ ಲೆಸೆನ್ಸ್ ಅನ್ನು ರದ್ದುಗೊಳಿಸಲು ಆರ್.ಟಿ.ಒ.ಗೆ ಕಳುಹಿಸಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version