ಡ್ರೋನ್ ಪ್ರತಾಪ್ ಅರೆಸ್ಟ್: ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಿಂದ ಸಂಕಷ್ಟ!

drone prathap
13/12/2024

 

ತುಮಕೂರು:  ಸ್ಟೋಟಕವನ್ನ ನೀರಿಗೆ ಎಸೆದು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್(Drone Pratap) ನನ್ನ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ  ಸ್ಪೋಟಕ ವಸ್ತುವನ್ನ ನೀರಿಗೆ ಎಸೆದಿದ್ದ ಪ್ರತಾಪ್,  ಯೂಟ್ಯೂಬ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ. ಈ ವಿಡಿಯೋ ಆಧರಿಸಿ ಎಫ್ ಐಆರ್ ದಾಖಲಿಸಲಾಗಿದೆ.

ಸ್ಫೋಟಕ ನೀರಿಗೆಸೆದ ವಿಡಿಯೋಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇಂತಹ ವಿಡಿಯೋ ಅಪಾಯಕಾರಿ ಎನ್ನುವ ಮಾತುಗಳು ಕೇಳಿ ಬಂದಿತ್ತು. ಈ ವಿಡಿಯೋ ವ್ಯಾಪಕ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.

ಪ್ರತಾಪ್ ನನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸ್ತಾ ಇದ್ದಾರೆ. ಬಿಎನ್ ಎಸ್ ಕಾಯಿದೆ ಸೆಕ್ಷನ್ 288 ಮತ್ತು ಸ್ಪೋಟಕ ವಸ್ತುಗಳ ಕಾಯಿದೆ ಸೆಕ್ಷನ್ 3 ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.  ಡ್ರೋನ್ ಪ್ರತಾಪ್ ನನ್ನು ಪೊಲೀಸರು ತೀವ್ರ ವಿಚಾರಣೆ  ಮಾಡುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version