ಪ್ರಧಾನಿ ಮನೆಯ ಸುತ್ತ ಡ್ರೋನ್ ಹಾರಾಟ..?! ದಿಲ್ಲಿ ಪೊಲೀಸರಿಂದ ತೀವ್ರ ತನಿಖೆ

03/07/2023

ಪ್ರಧಾನಮಂತ್ರಿ ನರೆಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮನೆಯು ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಸುಳಿದಾಡಿದೆ ಎನ್ನಲಾಗಿದೆ.

ಹೀಗಾಗಿ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ. ಮೋದಿಯವರ ಸುರಕ್ಷತೆಯನ್ನು ಖಾತ್ರಿಪಡಿಸುವ ಕಾರ್ಯವನ್ನು ನಿರ್ವಹಿಸುವ ವಿಶೇಷ ರಕ್ಷಣಾ ತಂಡ ದೆಹಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಭದ್ರತೆಯನ್ನು ಎಸ್ ಪಿಜಿ ನೋಡಿಕೊಳ್ಳುತ್ತದೆ. ಆದರೆ ಅವರು ದೆಹಲಿಯಲ್ಲಿನ ನಿವಾಸದಲ್ಲಿ ಇರುವಾಗ ದೆಹಲಿ ಪೊಲೀಸರು ಮತ್ತು ಎಸ್‌ಪಿಜಿ ಗ್ರೂಪ್ ಸೇರಿ ವಿವಿಧ ಹಂತಗಳಲ್ಲಿ ಭದ್ರತೆಯನ್ನು ನೀಡಲಾಗುತ್ತದೆ. ದೆಹಲಿ ಪೊಲೀಸರು ಸಹ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುತ್ತಾರೆ.

ಭದ್ರತಾ ದೃಷ್ಟಿಯಿಂದ ಮೋದಿ ನಿವಾಸ, ಪ್ರಧಾನಿ ಮೋದಿ ಸಾಗುವ ಮಾರ್ಗ, ಪ್ರಧಾನಿ ಕಾರ್ಯಕ್ರಮಗಳು ನಡೆಯುವ ಪ್ರದೇಶಗಳು ನೋ ಫ್ಲೈಯಿಂಗ್ ಝೋನ್ ವ್ಯಾಪ್ತಿಗೆ ಒಳಪಡುತ್ತವೆ. ಈ ಸ್ಥಳಗಳಲ್ಲಿ ಡ್ರೋನ್, ವಿಮಾನ, ಹೆಲಿಕಾಪ್ಟರ್ ಹಾರಾಟ ನಡೆಸುವಂತಿಲ್ಲ. ಆದರೆ ಮೋದಿ ಸರ್ಕಾರಿ ನಿವಾಸದ ಮೇಲೆ ಡ್ರೋನ್ ಹಾರಿರುವ ವಿಚಾರ ಬಹಳಷ್ಟು ಕುತೂಹಲ ಮೂಡಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version