ಡ್ರಗ್ಸ್ ಪ್ರಕರಣದಲ್ಲಿ ಶಾಸಕ ರುದ್ರಪ್ಪ ಲಮಾಣಿ ಪುತ್ರ ಸಹಿತ ನಾಲ್ವರಿಗೆ ಷರತ್ತು ಬದ್ಧ ಜಾಮೀನು
11/12/2020
ಬೆಂಗಳೂರು: ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಬಂಧನವಾಗಿದ್ದ ಶಾಸಕ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಸೇರಿದಂತೆ ನಾಲ್ವರಿಗೆ ಎನ್ ಡಿ ಪಿ ಎಸ್ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ದರ್ಶನ್ ಲಮಾಣಿ, ಪ್ರಸಿದ್ಧ್ ಶೆಟ್ಟಿ, ಹೇಮಂತ್, ಸುರೇಶ್ ಹೆಗ್ಡೆ ಇವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಡ್ರಗ್ಸ್ ಪ್ರಕರಣ ಸಂಬಂಧ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿತ್ತು. ಈ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು.
ಡಾರ್ಕ್‌ನೆಟ್ ಮೂಲಕ ಡ್ರಗ್ಸ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ನ. 4ರಂದು ಎಫ್‌ಐಆರ್ ದಾಖಲಾಗಿತ್ತು. ಅದೇ ಪ್ರಕರಣದಲ್ಲಿ, ಸುಜಯ್, ಹೇಮಂತ್ ಹಾಗೂ ಸುನೇಶ್ ಎಂಬಾತನನ್ನು ಬಂಧಿಸಲಾಗಿದೆ. ಅವರಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ದರ್ಶನ್ ನನ್ನು ಬಂಧಿಸಲಾಗಿತ್ತು.