ಪತ್ನಿಯನ್ನು ಕೊಂದು ಸ್ಥಳದಲ್ಲೇ ಮಲಗಿದ ಕುಡುಕ ಪತಿ!

ವಿಜಯಪುರ: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿಯೊಬ್ಬ, ಸ್ಥಳದಲ್ಲೇ ಮಲಗಿ ನಿದ್ರೆಸಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಢವಳಾರ ಗ್ರಾಮದಲ್ಲಿ ನಡೆದಿದೆ.
ಕಮಲಾಬಾಯಿ ಇಂಚಗೇರಿ (50) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪತಿ ಗೊಲ್ಲಾಳಪ್ಪ ಇಂಚಗೇರಿ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ.
ಕುಡಿದ ಮತ್ತಿನಲ್ಲಿ ಗೊಲ್ಲಾಳಪ್ಪ, ಪತ್ನಿ ಕಮಲಾಬಾಯಿ ಜೊತೆಗೆ ಗಲಾಟೆ ನಡೆಸಿದ್ದಾನೆ. ಈ ವೇಳೆ ಸಿಟ್ಟಿಗೆದ್ದ ಗೊಲ್ಲಾಳಪ್ಪ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದ್ದಾನೆ.
ತಡ ರಾತ್ರಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ ಬಳಿಕ ಕುಡಿದ ಮತ್ತಿನಲ್ಲಿ ಸ್ಥಳದಲ್ಲೇ ಮಲಗಿ ನಿದ್ರಿಸಿದ್ದಾನೆ. ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068