ಡಿಎಸ್ ಎಸ್ ಭೀಮ ಘರ್ಜನೆ ಮುಖಂಡ ಆನಂದ ನಕ್ರೆ ನಿಧನ
27/10/2025
ಕಾರ್ಕಳ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಭೀಮ ಘರ್ಜನೆ ಇದರ ಕಾರ್ಕಳ ತಾಲೂಕು ಸಂಘಟನಾ ಸಂಚಾಲಕರಾದ ಆನಂದ ನಕ್ರೆ (52)ಇವರು ಅನಾರೋಗ್ಯದಿಂದ ರವಿವಾರ ಬೆಳಗ್ಗೆ ನಿಧನರಾಗಿದ್ದಾರೆ.
ಇವರು ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ರವಿವಾರ ಮೃತಪಟ್ಟಿದ್ದಾರೆ. ಆನಂದ ನಕ್ರೆ ಅವರು ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಆಟೋ ಚಾಲಕರಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























