ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ DMO ಜೇಸಿಂತಾ ಡಿಸೋಜರನ್ನು ಅಭಿನಂದಿಸಿದ ಡಿಎಸ್ ಎಸ್

ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ DMO ಜೇಸಿಂತಾ ಡಿ ‘ಸೋಜ ರವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ — ದ.ಕ. ಜಿಲ್ಲಾ ಸಮಿತಿಯ ನಿಯೋಗವು ಭೇಟಿ ಮಾಡಿ ಶುಭಹಾರೈಸಿ, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆಗಳನ್ನು ಶೀಘ್ರವಾಗಿ ಸರಿಪಡಿಸುವಂತೆ ಒತ್ತಾಯಿಸಲಾಯಿತು.
ಸಂಘಟನೆಯ ಮನವಿಯ ಬಗ್ಗೆ ಪೂರಕವಾಗಿ ಸ್ಪಂದಿಸಿದ ಅಧೀಕ್ಷಕರು ಆದಷ್ಟು ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.
ನಿಯೋಗದಲ್ಲಿ DSS ರಾಜ್ಯ ಸಂಘಟನಾ ಸಂಚಾಲಕರಾದ ಎಂ. ದೇವದಾಸ್, ಜಿಲ್ಲಾ ಸಂಚಾಲಕರಾದ ರಘು ಕೆ. ಎಕ್ಕಾರು, ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಜಿಲ್ಲಾ ದಲಿತ ಕಲಾ ಮಂಡಳಿ ಸಂಚಾಲಕರಾದ ಸಂಕಪ್ಪ ಕಾಂಚನ್, ಜಿಲ್ಲಾ ಸಂಘಟನಾ ಸಂಚಾಲಕರಾದ ಸದಾಶಿವ ಪಡುಬಿದ್ರಿ, ನಾಗೇಶ್ ಚಿಲಿಂಬಿ, ರಾಜಯ್ಯ ಮಂಗಳೂರು, ಮಂಗಳೂರು ತಾಲೂಕು ಸಂಘಟನಾ ಸಂಚಾಲಕ ರವಿ ಪೇಜಾವರ, ಸೋಮಾನಂದ ಕವತ್ತಾರು ಮುಂತಾದವರು ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97