ಬಿಜೆಪಿ ಸರ್ಕಾರ ಬಂದ ಮೇಲೆ ದಲಿತರ ಮೇಲೆ ಒಂದಲ್ಲ, ಒಂದು ರೀತಿಯ ದೌರ್ಜನ್ಯ ಆಗ್ತಿದೆ: ದಸಂಸ
ಮಂಗಳೂರು: ಬಿಜೆಪಿ ಸರ್ಕಾರ ಬಂದಾಗಿನಿಂದ ದಲಿತರ ಮೇಲೆ ಒಂದಲ್ಲ ಒಂದು ರೀತಿಯ ದೌರ್ಜನ್ಯ ಹಾಗೂ ತಾರತಮ್ಯ ನಡೆಯುತ್ತಿದೆ ಎಂದು ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಸಂಘಟನಾ ಸಂಚಾಲಕರಾದ ಕೇಸಪ್ಪ ನೆಕ್ಕಿಲು ಹೇಳಿದ್ದಾರೆ.
ಗುರುವಾರ ಮಂಗಳೂರು ತಾಲೂಕು ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧ ಎದುರು ಭೂಮಿ ವಸತಿ ಶಿಕ್ಷಣ ಹಾಗೂ ದಲಿತರ ಮೇಲೆ ನಿರಂತರ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ದ.ಸಂ.ಸ. ಅಂಬೇಡ್ಕರ್ ವಾದ ಇದರ ಜಿಲ್ಲಾ ಪ್ರಧಾನ ಸಂಚಾಲಕರಾದ ಜಗದೀಶ್ ಪಾಂಡೇಶ್ವರ ಮಾತನಾಡಿ, ಹಲವಾರು ವರ್ಷಗಳಿಂದ ಎಸ್ಸಿ, ಎಸ್ಟಿಗೆ ಮೀಸಲಿಟ್ಟ ಡಿಸಿ ಮನ್ನ ಭೂಮಿಯನ್ನು ನಮ್ಮ ಭೂಮಿ ನಮ್ಮ ಹಕ್ಕು ಎಂಬ ವಾಕ್ಯದಲ್ಲಿ ಪ್ರತಿಭಟನೆಯನ್ನು ಮಾಡುತ್ತಾ ಬಂದಿದ್ದೇವೆ. ಈ ಪ್ರತಿಭಟನೆ ಸಲುವಾಗಿ ಕಳೆದ 2017ರಲ್ಲಿ ಅಂದಿನ ಜಿಲ್ಲಾಧಿಕಾರಿ ಡಾ. ಕೆ. ವಿ. ಜಗದೀಶ್ ಅವರು ಭೂ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವಣೆಯನ್ನು ಸಲ್ಲಿಸಿದ್ದಾರೂ. ಸರ್ಕಾರ ಈವರೆಗೆ ದಲಿತರಿಗೆ ಮೋಸ ಮಾಡುತ್ತಾ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಚುನಾವಣೆ ಹತ್ತಿರ ಬಂದಿದೆ. ಈ ಚುನಾವಣೆಗಾದರೂ ಎಚ್ಚೆತ್ತುಕೊಳ್ಳಿ. ಇಲ್ಲದಿದ್ದರೆ ಮುಂದಿನ ಚುನಾವಣೆಯಲ್ಲಿ ನಾವು ದ.ಕ. ಜಿಲ್ಲೆಯಲ್ಲಿ ಏನು ಮಾಡಬೇಕು ಎಂದು ನಾವೇ ನಿರ್ಧಾರ ಮಾಡುತ್ತೇವೆ ಎಂದು ಜಗದೀಶ್ ಇದೇ ವೇಳೆ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ದ.ಸಂ.ಸ. ರಾಜ್ಯ ಸಂಘಟನಾ ಸಂಚಾಲಕರಾದ ಚಂದು ಎಲ್., ತಾತ್ಕಾಲಿಕ ನೆಲೆಯಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ಸುಮಲತಾ ಮಾತನಾಡಿದರು.
ಈ ಸಂದರ್ಭದಲ್ಲಿ ಬಿ.ಕೆ.ವಸಂತ್ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರು, ಜಿಲ್ಲಾ ಸಂಘಟನಾ ಸಂಚಾಲಕರಾದ ನಾಗೇಶ್ ಮುಲ್ಲಿಕಾಡು, ವಸಂತ ಕುಬಲಾಡಿ ಕಡಬ ತಾಲೂಕು ಸಂಚಾಲಕರು, ಹರೀಶ್ ಮೂಡಬಿದಿರೆ ತಾಲೂಕು ಸಂಚಾಲಕರು ಉಪಸ್ಥಿತರಿದ್ದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka