3:36 AM Thursday 23 - October 2025

ದೆಹಲಿಯಿಂದ ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

18/06/2024

ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಇನ್ನು ಈ ವಿಮಾನವನ್ನು ಪರಿಶೀಲಿಸಿದಾಗ, ಅನುಮಾನಾಸ್ಪದವಾಗಿ ಏನೂ ಕಂಡುಬಾರದ ಕಾರಣ ಅದು ಹುಸಿ ಎಂದು ತಿಳಿದುಬಂದಿದೆ.

ಸೋಮವಾರ ಬೆಳಿಗ್ಗೆ 9.35 ಕ್ಕೆ ಐಜಿಐ ವಿಮಾನ ನಿಲ್ದಾಣದಲ್ಲಿ ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಡಿಐಎಎಲ್) ಗೆ ಇಮೇಲ್ ಬಂದಿತ್ತು.
ಜೂನ್ 17 ರಂದು ಬೆಳಿಗ್ಗೆ 9.35 ಕ್ಕೆ ಐಜಿಐ ವಿಮಾನ ನಿಲ್ದಾಣದ ಡಿಐಎಎಲ್ (ದೆಹಲಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್) ಕಚೇರಿಗೆ ದೆಹಲಿಯಿಂದ ದುಬೈ ವಿಮಾನದೊಳಗೆ ಬಾಂಬ್ ಬೆದರಿಕೆ ಬಂದಿದೆ. ಅದರಂತೆ, ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ ಮತ್ತು ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ” ಎಂದು ದೆಹಲಿ ಪೊಲೀಸರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ದೆಹಲಿಯಿಂದ ಕೆನಡಾದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ನಂತರ 13 ವರ್ಷದ ಬಾಲಕ ಉತ್ತರ ಪ್ರದೇಶದ ಮೀರತ್ ನಿಂದ ಮೇಲ್ ಕಳುಹಿಸಿದ್ದಾನೆ ಎಂದು ಪೊಲೀಸರು ಪತ್ತೆಹಚ್ಚಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version