ಔರಾದ: ಕೆಸರು ಗದ್ದೆಯಾದ ರಸ್ತೆ: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಧರು !

ಔರಾದ: ಬೀದರ ಜಿಲ್ಲೆ ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದ ಟಿಪ್ಪು ಸುಲ್ತಾನ ಚೌಕ್ ಮುಂಭಾಗದ ರಸ್ತೆಯಲ್ಲಿ ಕೊಳಚೆ ನೀರು ನಿಂತು ಮಾರಕ ರೋಗಕ್ಕೆ ಆಹ್ವಾನ ನೀಡುತ್ತಿದೆ
ಈ ಕೊಳಚೆ ನೀರು ನಿಂತಿರುವ ರಸ್ತೆಯ ಸುತ್ತಲು ಸಾಕಷ್ಟು ಮನೆಗಳಿದ್ದು, ಇದರ ದುರ್ವಾಸನೆಯಿಂದಾಗಿ ಸುತ್ತಮುತ್ತಲಿನ ಜನರಿಗೆ ರೋಗದ ಭೀತಿ ಕಾಡುತಿದೆ.
ಗ್ರಾಮದ ಮುಖ್ಯ ರಸ್ತೆಯಲ್ಲಿ ಈ ಅವ್ಯವಸ್ಥೆ ಇದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದನ್ನು ನೋಡಿದರೂ ನಮಗೂ ಇದಕೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ರಾಜ್ಯವೇ ಮಾರಕ ರೋಗವಾದ ಡೆಂಗ್ಯೂ ರೋಗವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದರೆ ಈ ಗ್ರಾಮದ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸದಸ್ಯರು ನಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಈ ಕೂಡಲೇ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈ ಗ್ರಾಮದ ಕಡೆ ಗಮನ ಹರಿಸಿ ಜನರ ಆರೋಗ್ಯ ಕಾಪಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮುಗಿಯದ ಸಮಸ್ಯೆ: ಇಲ್ಲಿನ ರಸ್ತೆಯಲ್ಲಿ ಅನೇಕ ತಿಂಗಳಿನಿಂದಲೂ ಸಮಸ್ಯೆ ಹೀಗೆ ಇದ್ದು, ಈ ಬಗ್ಗೆ ಗ್ರಾಪಂ ಅಧಿಕಾರಿಗಳು ಸಮಸ್ಯೆ ಗಮನಕ್ಕೆ ಬಂದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ರವಿಕುಮಾರ ಸಿಂಧೆ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97