ದುನಿಯಾ ವಿಜಯ್ 2ನೇ ಪುತ್ರಿ ಸಿನಿಮಾರಂಗಕ್ಕೆ ಎಂಟ್ರಿ! - Mahanayaka

ದುನಿಯಾ ವಿಜಯ್ 2ನೇ ಪುತ್ರಿ ಸಿನಿಮಾರಂಗಕ್ಕೆ ಎಂಟ್ರಿ!

city lights kannada movie
06/09/2024

ನಟ, ನಿರ್ದೇಶಕ ದುನಿಯಾ ವಿಜಯ್ ಅವರ ಮೊದಲ ಪುತ್ರಿ ರಿತನ್ಯಾ ಇತ್ತೀಚೆಗೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಇದೀಗ ಅವರ ಎರಡನೇ ಪುತ್ರಿ ಮೋನಿಷಾ ಕೂಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

‘ಸಿಟಿ ಲೈಟ್ಸ್’ ಎಂಬ ಸಿನಿಮಾದ ಮೂಲಕ ದುನಿಯಾ ವಿಜಯ್ ಎರಡನೇ ಪುತ್ರಿ ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ನ್ನು ಮೋನಿಷಾ ಹಂಚಿಕೊಂಡಿದ್ದಾರೆ.

ಮೋನಿಷಾ ಬರೆದದಿಷ್ಟು:

ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು ಈ ಶುಭದಿನದಂದು ನಿಮ್ಮೊಂದಿಗೆ ನನ್ನ ಮೊದಲನೆಯ ಚಿತ್ರ ‘ಸಿಟಿ ಲೈಟ್ಸ್’ ನ ಫಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುತ್ತಿದ್ದೇನೆ. ‘ಸಲಗ’ ಹಾಗೂ ‘ಭೀಮ’ ಚಿತ್ರದ ಯಶಸ್ಸಿನ ನಂತರ ನನ್ನ ಅಪ್ಪ ವಿಜಯಕುಮಾರ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮತ್ತೊಂದು ಚಿತ್ರ ಇದಾಗಿದೆ. ಇಂತಹ ಅದ್ಭುತ ತಂಡದೊಟ್ಟಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಮತ್ತು ಪ್ರೋತ್ಸಾಹ ಸದಾ ನಮ್ಮ ಮೇಲಿರಲಿ ಧನ್ಯವಾದಗಳು

ಈ ಚಿತ್ರ ನಟ ವಿಜಯ್ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ. ಇಂತಹ ಅದ್ಭುತ ತಂಡದೊಂದಿಗೆ ಕೆಲಸ ಮಾಡುವ ಅವಕಾಶ ದೊರೆತಿರುವುದು ನನ್ನ ಅದೃಷ್ಟ ನಿಮ್ಮ ಪ್ರೀತಿ ಆಶೀರ್ವಾದ ನಮ್ಮ ಮೇಲಿರಲಿ ಅಂತ ಮೋನಿಷಾ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

ದುನಿಯಾ ವಿಜಯ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಬೆಂಗಳೂರು ಮಹಾನಗರಕ್ಕೆ ಕನಸು ಕಟ್ಟಿಕೊಂಡು ಬರುವವರ ಸುತ್ತ ಮಾಡಿರುವ ಕಥೆ ಇದಾಗಿದೆಯಂತೆ. ಮುಗ್ಧ ಹಳ್ಳಿ ಹುಡುಗಿಯ ಪಾತ್ರದಲ್ಲಿ ಮೋನಿಷಾ ಕಾಣಿಸಿಕೊಳ್ಳಲಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ