ದುರ್ಗಾ ದೌಡ್ ಕಾರ್ಯಕ್ರಮ ತಲವಾರು ಪ್ರದರ್ಶನ: ಪ್ರಕರಣ ದಾಖಲಿಸಲು ಒತ್ತಾಯ - Mahanayaka
10:40 AM Tuesday 27 - January 2026

ದುರ್ಗಾ ದೌಡ್ ಕಾರ್ಯಕ್ರಮ ತಲವಾರು ಪ್ರದರ್ಶನ: ಪ್ರಕರಣ ದಾಖಲಿಸಲು ಒತ್ತಾಯ

durga dwod
05/10/2022

ಉಡುಪಿ: ನಗರದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ತಲವಾರು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಅವರಿಗೆ ದೂರು ಸಲ್ಲಿಸಿದರು.

ದುರ್ಗಾ ದೌಡ್ ನಲ್ಲಿ ಅಕ್ರಮವಾಗಿ ತಲವಾರು ಪ್ರದರ್ಶನ ಮಾಡುವುದರೊಂದಿಗೆ ಶ್ರೀಕಾಂತ್ ಶೆಟ್ಟಿ ಮತ್ತು ಕಾಜಲ್ ಹಿಂದುಸ್ತಾನಿ ಪ್ರಚೋದನಕಾರಿಯಾಗಿ ಮಾತನಾಡಿ ಉಡುಪಿಯ ಶಾಂತಿಯುತ ವಾತಾವರಣ ಕೆಡಿಸಲು ಯತ್ನಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ದಲಿತ ದಮನಿತ ಹೋರಾಟ ಸಮಿತಿಯ ಶ್ಯಾಮರಾಜ್ ಬಿರ್ತಿ, ದಲಿತ ಸಂಘರ್ಷ ಸಮಿತಿಯ ಸುಂದರ್ ಮಾಸ್ತರ್,ಎಪಿಸಿಆರ್ ಜಿಲ್ಲಾ ಸಂಚಾಲಕ ಹುಸೇನ್ ಕೋಡಿಬೆಂಗ್ರೆ, ಸುನ್ನಿ ಸಂಯುಕ್ತ ಜಮಾಅತಿನ ಜಿಲ್ಲಾಧ್ಯಕ್ಷ ಅಬುಬಕ್ಕರ್ ನೇಜಾರ್, ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ, ಕ್ರೈಸ ಮುಖಂಡ ಚಾರ್ಲ್ಸ್‌ ಅಂಬ್ಲರ್, ವಿಲಿಯಂ ಮಾರ್ಟಿಸ್, ಸಿ.ಪಿ‌.ಎಮ್ ಮುಖಂಡ ಬಾಲಕೃಷ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಫಣಿರಾಜ್,ಸಾಲಿಡಾರಿಟಿಯ ಅಫ್ವಾನ್ ಹೂಡೆ, ಮಂಜುನಾಥ್ ಬಾಳ್ಕುದ್ರು,ಮುಸ್ಲಿಮ್ ಒಕ್ಕೂಟದ ಉಪಾಧ್ಯಕ್ಷ ಇದ್ರಿಸ್ ಹೂಡೆ, ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ