ಪ್ರಜ್ವಲ್ ರೇವಣ್ಣ ಬಂಧನದ ವೇಳೆ ವಿಮಾನ ನಿಲ್ದಾಣದಲ್ಲಿ ಡಿ.ಕೆ.ಸುರೇಶ್ ಪ್ರತ್ಯಕ್ಷ!

ಬೆಂಗಳೂರು: ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ನಿನ್ನೆ ಮಧ್ಯರಾತ್ರಿ ಬಂದಿಳಿದರು. ಈ ವೇಳೆ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಆಗಮಿಸಿ ಅಚ್ಚರಿ ಸೃಷ್ಟಿಸಿದರು.
ಇದೇ ವೇಳೆ ಅವರನ್ನು ಸುದ್ದಿಗಾರರು ಮಾತನಾಡಿಸಿದ್ದು, ಪ್ರಜ್ವಲ್ ವಿರುದ್ಧ ಸಾಕಷ್ಟು ಆರೋಪಗಳಿವೆ, ಅದನ್ನು ಎದುರಿಸಲು ಅವರು ಎಸ್ ಐಟಿ ಮುಂದೆ ಹಾಜರಾಗುತ್ತಾರೆ. ಇದು ಸ್ವಯಂಕೃತ ಅಪರಾಧ ಅಷ್ಟೇ ಎಂದರು.
ಪೆನ್ ಡ್ರೈವ್ ಪ್ರಕರಣದ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ. ಕಾನೂನು ಪ್ರಕಾರ ಏನು ತನಿಖೆ ಅಗಬೇಕಿದೆಯೋ ಅದರಂತೆ ಆಗಲಿದೆ ಎಂದು ಇದೇ ವೇಳೆ ಅವರು ತಿಳಿಸಿದರು.
ಪ್ರಕರಣ ಬೆಳಕಿಗೆ ಬಂದು 33 ದಿನಗಳ ನಂತರ ಪ್ರಜ್ವಲ್ ಬಂದಿದ್ದಾರೆ. ಸಾಕ್ಷಿ ನಾಶ ಸಾಧ್ಯತೆ ಇದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಗೊತ್ತಿಲ್ಲ, ಎಸ್ ಐಟಿ ತನಿಖೆ ನಡೆಸಲಿದೆ, ತನಿಖೆಯಿಂದ ಸತ್ಯಾಂಶ ಹೊರಬರಲಿ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97