ಸಹೋದರಿಯ ಮೇಲೆ ಅತ್ಯಾಚಾರ ನಡೆದ ಬಗ್ಗೆ ದೂರು ದಾಖಲಿಸಿದ್ದಕ್ಕೆ ಯುವಕನ ಮರ್ಮಾಂಗ ಕತ್ತರಿಸಿದ ಆರೋಪಿಗಳು - Mahanayaka

ಸಹೋದರಿಯ ಮೇಲೆ ಅತ್ಯಾಚಾರ ನಡೆದ ಬಗ್ಗೆ ದೂರು ದಾಖಲಿಸಿದ್ದಕ್ಕೆ ಯುವಕನ ಮರ್ಮಾಂಗ ಕತ್ತರಿಸಿದ ಆರೋಪಿಗಳು

up crime news
04/07/2021


Provided by

ಸುಲ್ತಾನ್ ಪುರ: ಸಹೋದರಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ ಸಹೋದರನ ಮರ್ಮಾಂಗವನ್ನು ಆರೋಪಿಗಳು ಕತ್ತರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಸುಲ್ತಾನ್ ಪುರದಲ್ಲಿ ನಡೆದಿದ್ದು, ಗಾಯಾಳು ಯುವಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

2019ರಲ್ಲಿ ಸಹೋದರಿ ಮೇಲೆ ನಡೆದಿದ್ದ ಅತ್ಯಾಚಾರಕ್ಕ ಸಂಬಂಧಿಸಿದಂತೆ ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದ. ಈ ದೂರಿನನ್ವಯ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದರು. ಆದರೆ, ಆ ಬಳಿಕ ಜಾಮೀನು ಪಡೆದು ಹೊರ ಬಂದ ಆರೋಪಿಗಳು, ಪ್ರಕರಣವನ್ನು ರಾಜಿಯಲ್ಲಿ ಮುಗಿಸಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆದರೆ ಇದಕ್ಕೆ ಸಂತ್ರಸ್ತೆಯ ಸಹೋದರ ಒಪ್ಪಿರಲಿಲ್ಲ ಎನ್ನಲಾಗಿದೆ.

ಜೂನ್ 26ರಂದು ಸಂತ್ರಸ್ತೆಯ ಸಹೋದರ ಬೇರೊಂದು ಗ್ರಾಮಕ್ಕೆ ಹೋಗುತ್ತಿದ್ದ ವೇಳೆ. ಆತನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಅಮಾನವೀಯವಾಗಿ ಥಳಿಸಿ ಆತನ ಮರ್ಮಾಂಗವನ್ನು ಕತ್ತರಿಸಿದ್ದು, ಬಳಿಕ  ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬಸ್ಥರು ನ್ಯಾಯ ಕೇಳಿ ಸಿಎಂ ಆದಿತ್ಯನಾಥ್ ಗೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ